ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ: ಸಚಿವ ಸುರೇಶಕುಮಾರ

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕಳೆದ ವರ್ಷದಂತೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಶಿಕ್ಷಣ ಸಚಿವ ಎಸ್‌.ಸುರೇಶಕುಮಾರ ಹೇಳಿದರು.
ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗದಂತೆ ಕ್ರಮ ವಹಿಸಬೇಕೆಂದು ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ ೧೮-೨೦ ವಿದ್ಯಾರ್ಥಿಗಳಷ್ಟೇ ಇರಬೇಕು. ಪ್ರತಿ ಕೊಠಡಿಗೆ ಅನುಗುಣವಾಗಿ ಮಂಡಳಿಯಿಂದಲೇ ಪ್ರತ್ಯೇಕ ಪ್ರಶ್ನೆ ಪತ್ರಿಕೆ ಬಂಡಲ್‌ ಪೂರೈಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ, ನೀರು, ಮಾಸ್ಕ್‌, ಸೋಪಿನ ವ್ಯವಸ್ಥೆಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಲಾಗಿದೆ ಎಂದರು.
ತಾಲೂಕು ಇಲ್ಲವೇ ಹೋಬಳಿ ಮಟ್ಟದಲ್ಲಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ನಡೆಸಿ ವಿದ್ಯಾರ್ಥಿಗಳ ಅಭ್ಯಾಸದ ಪ್ರಗತಿ ಕುರಿತು ಮಾಹಿತಿ ಪಡೆಯಬೇಕು. ಸರಕಾರಿ ಶಾಲೆಗಳಲ್ಲಿ ಯಾವುದೇ ವಿಷಯದ ಶಿಕ್ಷಕರ ಕೊರತೆಯಿದ್ದರೆ, ಸಮೀಪದ ಶಾಲೆಗಳ ಶಿಕ್ಷಕರನ್ನು ನಿಯೋಜಿಸಿ ಪಠ್ಯಕ್ರಮ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ಗಮನ ಹರಿಸಬೇಕು. ಯಾವ ವಿಷಯಗಳಲ್ಲಿ ಮಕ್ಕಳು ಹಿಂದುಳಿದಿದ್ದಾರೆ ಎಂಬುದನ್ನು ಪರಿಗಣಿಸಿ ಬೋಧನೆಗೆ ವ್ಯವಸ್ಥೆ ಮಾಡಬೇಕು. ಉತ್ತಮ ಅಂಕಗಳಿಸುವ ಕುರಿತು ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement