ಕಸಾಪ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಿದ್ದಪ್ಪ ಹೊಟ್ಟಿ ಅವಿರೋಧ ಆಯ್ಕೆ…ಹ್ಯಾಟ್ರಿಕ್‌ ಗೆಲುವಿನ ಸಾಧನೆ

posted in: ರಾಜ್ಯ | 0

ಯಾದಗಿರಿ: ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಮೂರನೆಯ ಬಾರಿಗೆ ಸಿದ್ದಪ್ಪ ಹೊಟ್ಟಿಯವರು ಅವಿರೋಧ ಅಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸಿದ್ದಪ್ಪ ಹೊಟ್ಟಿ ಹಾಗೂ ಶ್ರೀಶೈಲ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ದಿನದಂದು ಶ್ರೀಶೈಲ ಪೂಜಾರಿ ಹೊಟ್ಟಿಯವರನ್ನು ಬೆಂಬಲಿಸಿ ಅವರು ತಮ್ಮ ನಾಮ ಪತ್ರ ಹಿಂದಕ್ಕೆ ಪಡೆದರು. ಇದರಿಂದಾಗಿ ಹೊಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ರಾಜ್ಯದಲ್ಲಿ ಪ್ರಥಮ ಗೆಲವು ಎಂದು ಹೇಳಬಹುದಾಗಿದೆ.
ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಳೆದ ಎರಡು ಅವಧಿಯಲ್ಲಿ ಜಿಲ್ಲಾ ಸಮ್ಮೇಳನಗಳನ್ನು ನಡೆಸಿದ್ದೇನೆ ಮತ್ತು ಅನೇಕ ಪುಸ್ತಕಗಳನ್ನು ಪ್ರಕಟಿಸಿದ್ದೇನೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಹಲವರು ಆಕಾಂಕ್ಷಿಯಾಗಿದ್ದರು. ಆದರೆ ನನಗೆ ಮೂರನೆಯ ಬಾರಿಗೆ ಸಾಹಿತ್ಯ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿದ ಎಲ್ಲರಿಗೂ ಋಣಿಯಾಗಿದ್ದೇನೆ ಎಂದು ಹೇಳಿದರು.
ಜಿಲ್ಲೆ ಗಡಿಗೆ ಅಂಟಿಕೊಂಡಿರುವ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಕನ್ನಡ ಪಸರಿಸುವ ಕೆಲಸ ಮಾಡುವ ಹಂಬಲ ಹೊಂದಿದ್ದು, ಕಲೆ, ಸಂಸ್ಕೃತಿ ಮತ್ತು ಸಾಹಿತಿ  ಕವಿಗಳಿಗೆ ಸೂಕ್ತ ಅವಕಾಶ ಒದಗಿಸುವ ಭರವಸೆಯನ್ನು ನೀಡಿದರು. ಬರುವ ದಿನಗಳಲ್ಲಿ ವಲಯ, ತಾಲೂಕು ಮತ್ತು ಜಿಲ್ಲಾ ಸಮ್ಮೇಳಗಳನ್ನು ಸಂಘಟಿಸಿ, ಬರುವ ದಿನಗಳಲ್ಲಿ 100 ಪುಸ್ತಕಗಳನ್ನು ಪ್ರಕಟಿಸುವುದಾಗಿ ತಿಳಿಸಿದರು.
ಡಾ. ಸುಭಾಶ್ಚಂದ್ರ ಕೌಲಗಿ, ಅಯ್ಯಣ್ಣ ಹುಂಡೇಕಾರ, ಚಿಎಂ.ಪಟ್ಟೇದಾರ, ಘಾಳಪ್ಪ ಪೂಜಾರಿ, ಡಾ. ಭೀಮರಯ ಲಿಂಗೇರಿ, ಡಾ. ಎಸ್.ಎಸ್.ನಾಯಕ ಮತ್ತು ಶ್ರೀಶೈಲ ಪೂಜಾರಿ ಉಪಸ್ಥಿತರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ