ಧಾರ್ಮಿಕ ಮತಾಂತರ: ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ನವ ದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಪೀಠದಲ್ಲಿ ನಡೆದಿದೆ.
ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರಿಗೆ, ಇದು ಆರ್ಟಿಕಲ್ 32 ರ ಅಡಿಯಲ್ಲಿ ಯಾವ ರೀತಿಯ ರಿಟ್ ಅರ್ಜಿಯಾಗಿದೆ ಎಂದು ಪ್ರಶ್ನಿಸಲಾಯಿತು.
18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಯಾವುದೇ ಧರ್ಮವನ್ನು ಆಯ್ಕೆ ಮಾಡಲು ಆಯ್ಕೆ ಮಾಡುವುದನ್ನು ತಡೆಯಲು ಯಾವುದೇ ಕಾರಣವಿಲ್ಲ ಎಂದು ಹೇಳಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಹೇಳಲು ಆಗದು, 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಸ್ವತಂತ್ರರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.. ಸಲ್ಲಿಕೆಯಾಗಿರುವ ಅರ್ಜಿಯನ್ನು ಪ್ರಚಾರಕ್ಕಾಗಿ ಸಲ್ಲಿಸಿದಂತೆ ಇದೆ ಎಂದು ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ವಾದ ಮಂಡಿಸಿದರೆ ದಂಡ ವಿಧಿಸಲಾಗುವುದು ಎಂದು ಅರ್ಜಿದಾರರಾದ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರಿಗೆ ಎಚ್ಚರಿಕೆ ನೀಡಿತು.ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅರ್ಜಿಯನ್ನು ವಾಪಸ್‌ ಪಡೆಯಲಾಯಿತು.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement