ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರ ಸಾವು

ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಗರದ ವಾಡಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.
ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿ ಆ ಮಹಡಿಗೆ ಸೀಮಿತವಾಗಿ ಉಳಿದಿದೆ ಮತ್ತು ಮತ್ತಷ್ಟು ಹರಡಲಿಲ್ಲ” ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್‌ನ (ಎನ್‌ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ಹೇಳಿದ್ದಾರೆ. ಇದು ಕೊವಿಡ್‌ ಅಲ್ಲದ ಆಸ್ಪತ್ರೆಯಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಹಲವಾರು ಅಗ್ನಿಶಾಮಕ ದಳ ಸ್ಥಳಕ್ಕೆಆಗಮಿಸಿದೆ. ಬೆಂಕಿ ಕಾಣಿಸಿಕೊಂಡಾಗ ಎರಡನೇ ಮಹಡಿಯಲ್ಲಿ 10 ರೋಗಿಗಳು ಇದ್ದರು. ಆರು ರೋಗಿಗಳು ತಾವೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ