ಬೆಂಗಳೂರು ಸೇರಿದಂತೆ 8 ನಗರಗಳಿಗೆ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಪ್ರಕಟ..ಇಲ್ಲಿದೆ ಮಾಹಿತಿ

posted in: ರಾಜ್ಯ | 0

ಬೆಂಗಳೂರು : ರಾಜ್ಯ ಸರ್ಕಾರ ಕೊರೋನಾ ಸೋಂಕಿತ 8 ನಗರಗಳಲ್ಲಿ ರಾತ್ರಿ ಕರ್ಪ್ಯೂವನ್ನು ಏಪ್ರಿಲ್ 10ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದ್ದು, ಈ ಕುರಿತು ಸರ್ಕಾರ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ರಾಜ್ಯದ 8 ನಗರಗಳಲ್ಲಿ ಅನ್ವಯವಾಗುವಂತ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕರ್ಪ್ಯೂ ಜಾರಿಗೆ ಮುನ್ನವೇ ಕಚೇರಿಯಲ್ಲಿ ಇರಬೇಕು ಎಂದು ಸೂಚಿಸಲಾಗಿದೆ.
ನಾಳೆ ರಾತ್ರಿ 10 ರಿಂದ ಏಪ್ರಿಲ್ 20ರ ವರೆಗೆ ಜಾರಿಯಲ್ಲಿರುವಂತ 8 ನಗರಗಳಲ್ಲಿನ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಅಗತ್ಯ ಸೇವೆ ಹೊರತುಪಡಿಸಿ, ಉಳಿದೆಲ್ಲ ಸೇವೆಗಳಿಗೆ ನಿರ್ಬಂಧ ಹಾಕಲಾಗಿದೆ. ರಾತ್ರಿ ವೈದ್ಯಕೀಯ ಸೇವೆಗೆ ಅನುಮತಿಸಿರುವ ಸರ್ಕಾರ, ಹೋಂ ಡಿಲಿವರಿ, ಇ-ಕಾಮರ್ಸ್ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದೆ.. ಸರಕು ಸಾಗಾಣೆ ವಾಹನಗಳ ಸಂಚಾರಕ್ಕೂ ಅನುಮತಿಸಲಾಗಿದೆ.
ರಾತ್ರಿ ಸಂಚರಿಸುವ ಪ್ರಯಾಣಿಕರಿಗೆ ಟಿಕೆಟ್ ಮುಂಗಡ ಬುಕ್ಕಿಂಗ್ ಇದ್ದವರಿಗೆ ಮಾತ್ರವೇ ಅವಕಾಶ ನೀಡಲಾಗಿದ್ದು. ರಾತ್ರಿ 10 ಗಂಟೆಯ ನಂತರ ಈ ನಗರಗಳಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಓದಿರಿ :-   ಸಂಸ್ಕೃತದಲ್ಲಿ ಗಲ್ಲಿ ಕ್ರಿಕೆಟ್‌ನ ಕಾಮೆಂಟರಿ: ನಿರೂಪಕನ ಭಾಷಾ ನಿರರ್ಗಳತೆಗೆ ಬೆರಗಾದ ಇಂಟರ್ನೆಟ್: ವಿಡಿಯೋ ವೈರಲ್ ...ವೀಕ್ಷಿಸಿ

ರಾತ್ರಿ ಕರ್ಪ್ಯೂ’ ಮಾರ್ಗಸೂಚಿ ಕ್ರಮಗಳು:
* ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ, ರಾತ್ರಿ 10ರ ನಂತರ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
* ಅಗತ್ಯ ಸೇವೆಗಳ ವಾಹನಗಳು, ಸರಕು ಸಾಗಾಣಿಕೆ ವಾಹನಗಳು, ಹೋಂ ಡಿಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
* ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ ಗಳ ಆಧಾರದ ಮೇಲೆ ಆಟೋ, ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ.
*ವಿವಿಧ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ
*ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು, ಕಂಪನಿಗಳು, ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ಆದರೆ ಸಂಬಂಧಿಸಿದ ಕಾರ್ಮಿಕರು ರಾತ್ರಿ ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರತಕ್ಕದ್ದು.
ಈ ಆದೇಶವನ್ನು ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಮೈಸೂರು, ಕಲಬುರ್ಗಿ, ಮಂಗಳೂರು ಮತ್ತು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು ಎಂಬುದಾಗಿ ತಿಳಿಸಿದೆ.
ಒಂದು ವೇಳೆ ಈ ನಿಯಮಗಳನ್ನು ಮೀರಿದಲ್ಲಿ, ಅಂತಹ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗುಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ನಿಗದಿ: ಅಕ್ಟೋಬರ್‌ 28ರಂದು ಮತದಾನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement