ಯತ್ನಾಳ ಕುರಿತ ಗೊಂದಲ ಬಗೆಹರಿಸದ ಅರುಣ ಸಿಂಗ್‌ ಹೇಳಿಕೆ

ಬೆಳಗಾವಿ :ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಹೊರ ಹಾಕಿದರೆ ಅವರು ಸ್ವತಂತ್ರರಾಗುತ್ತಾರೆ. ಕೆಲವು ವಿಷಯಗಳನ್ನು ಮಾಧ್ಯಮದವರ ಮುಂದೆ ಹೇಳಲು ಆಗುವುದಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಬಿಜೆಪಿ ಶಾಸಕಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಲ್ಲಿ ಜೀರೋ. ಅವರ ಹೆಸರು ಇಲ್ಲಿ ಪ್ರಸ್ತಾಪ ಬೇಡ ಎಂದು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಕಾರಣಕ್ಕೆ ಬಿಜೆಪಿಯಿಂದ ಅವರನ್ನು ಹೊರ ಹಾಕುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.
ಪಕ್ಷದಿಂದ ಹೊರ ಹಾಕುವಂತಹ ವ್ಯಕ್ತಿಯೇ ಅವರಾಗಿದ್ದಾರೆ ಎಂದು ಹೇಳಿದ ಅವರು, ಯತ್ನಾಳ್ ಕುರಿತ ಪ್ರಶ್ನೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಾಧ್ಯಮದವರಿಗೆ ಯತ್ನಾಳ್ ಬಗ್ಗೆ ನಂಬಿಕೆ ಇರಬಹುದು, ಆದರೆ ಬಿಜೆಪಿಗೆ ಅವರು ಜೀರೋ. ಯಡಿಯೂರಪ್ಪ ಬಗ್ಗೆ ಧ್ವನಿ ಎತ್ತಿರುವ ಕಾರಣಕ್ಕೆ ಈಗಾಗಲೇ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement