ಎಸ್‌ಎಸ್‌ಎಲ್‌ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಟಿವಿ ಚಾನೆಲ್‌..!

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮೇ 24 ರಿಂದ ಪಿಯುಸಿ ಪರೀಕ್ಷೆಗಳು, ಜೂನ್ 20 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ ಪಿಯುಸಿ ಗೆ 7,1,651 ವಿದ್ಯಾರ್ಥಿಗಳು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,75,798 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುವುದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.
ಕೊರೊನಾ ಏಪ್ರಿಲ್ ನಲ್ಲಿ ಹೆಚ್ಚಾಗಲಿದ್ದು, ಮೇ ನಲ್ಲಿ ಕಡಿಮೆಯಾಗುತ್ತದೆ ಎಂಬ ವರದಿಗಳಿದೆ. ಕೊರೊನಾ ಜೊತೆ ಬದುಕು ಅನಿವಾರ್ಯವಾಗಿದೆ. ಕೊರೊನಾ ನಡುವೆ ಪರೀಕ್ಷೆ ನಡೆಸುವುದು ನಮ್ಮ ಕರ್ತವ್ಯ. ಕೊರೊನಾ ನಡುವೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಜವಾದ ಕೊರೊನಾ ವಾರಿಯರ್ಸ್ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement