ಕೂಚ್ ಬೆಹರ್ ನಲ್ಲಿ ಚುನಾವಣಾ ಹಿಂಸಾಚಾರ, ಭದ್ರತಾ ಪಡೆ ಗುಂಡಿಗೆ ಐವರ ಸಾವು

ಕೊಲ್ಕತಾ: 44 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸುಗೊಂಡಿರುವ ನಡುವೆಯೇ ಚುನಾವಣಾ ಹಿಂಸೆಯಲ್ಲಿ ಐವರು ಸಿಐಎಸ್‌ ಎಫ್‌ ಪೆಗಳ ಗುಂಡಿನ ದಾಳಿಗೆ ಐವರು ಮೃತಪಟ್ಟ ಘಟನೆ ಕೂಚ್‌ ಬೆಹಾರ್‌ ಜಿಲ್ಲೆಯಲ್ಲಿ ಶನಿವಾರ ನಡೆದ ಬಗ್ಗೆ ವರದಿಯಾಗಿದೆ.
ಸಿಟಾಲ್ಕುಚಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಗುಂಪೊಂದು ಸಿಐಎಸ್ ಎಫ್ ಯೋಧರ ಬಳಿ ಇದ್ದ ರೈಫಲ್ಸ್ ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿದಾಗ ಸಿಐಎಸ್ ಎಫ್ ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿ ಬರಬೇಕಿದೆ. ಗಲಭೆ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವರದಿ ನೀಡುವಂತೆ ಚುನಾವಣಾ ಆಯೋಗ ಸೂಚಿಸಿದೆ. ಶನಿವಾರ ಪಶ್ಚಿಮ ಬಂಗಾಳದಲ್ಲಿ ಪಶ್ಚಿಮಬಂಗಾಳದ ನಾಲ್ಕನೇ ಹಂತದ ಮತದಾನದಲ್ಲಿ 44 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿದೆ. ಬೆಳಿಗ್ಗೆ ಕೂಚ್ ಬೆಹರ್ ಜಿಲ್ಲೆಯಲ್ಲಿ ಮತಗಟ್ಟೆ ಹೊರಭಾಗದಲ್ಲಿ ಮತದಾರನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈಯಲಾಗಿತ್ತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement