ಕೊವಿಡ್‌ ಲಸಿಕೆಯಷ್ಟೇ ಅಲ್ಲ,ಕೆಲವು ರಾಜ್ಯಗಳಲ್ಲಿ ರೆಮ್ಡೆಸಿವಿರ್ ಕೊರತೆ ..!?

ನವ ದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನ ವಿಸ್ತರಣೆ ಮಾಡುತ್ತಿರುವ ಸಂದರ್ಭದಲ್ಲಿ ತಮ್ಮ ರಾಜ್ಯಗಳಲ್ಲಿ ಲಸಿಕೆ ಕೊರತೆಯುಂಟಾಗಿದೆ ಎಂದು ರಾಜಸ್ತಾನ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಅನೇಕ ಕಡೆ ಲಸಿಕಾ ಕೇಂದ್ರಗಳನ್ನು ಕೊರತೆ ಕಾರಣದಿಂದ ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.ಈಗ ರೆಮ್ಡೆಸಿವಿರ್ ಲಸಿಕೆಯ ಕೊರತೆ ಬಗ್ಗೆ ಕೆಲ ರಾಜ್ಯಗಳಲ್ಲಿ ವರದಿಯಾಗಿದೆ. ಮುಖ್ಯವಾಗಿ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಕರ್ನಾಟಕಗಳಿಂದ ಈ ಕೊರತೆ ಬಗ್ಗೆ ವರದಿಯಾಗಿವೆ.
ಇದರ ಪೂರೈಕೆಯನ್ನು ಹೆಚ್ಚಿಸಲು ನಾವು ಕೇಂದ್ರ ಸರ್ಕಾರವನ್ನು ಕೇಳುತ್ತಿದ್ದೇವೆ, ಕೋವಿಡ್ ಲಸಿಕೆ ಕೇಂದ್ರವನ್ನು ಸ್ಥಾಪಿಸಲು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ನಾವು ಸಾಕಷ್ಟು ಹಣವನ್ನು ಖರ್ಚು ಮಾಡುತ್ತೇವೆ, ಅನೇಕ ತರಬೇತಿ ಪಡೆದ ಜನರನ್ನು ತೊಡಗಿಸಿಕೊಳ್ಳುತ್ತೇವೆ ಆದರೆ ಈಗ ಲಸಿಕೆ ಕೊರತೆಯಿಂದ ಈ ಕೇಂದ್ರಗಳನ್ನು ಸ್ಥಗಿತಗೊಳಿಸಬೇಕಾಗಿದೆ ಎಂದು ಮಹಾರಾಷ್ಟ್ರ ಹೇಳಿದೆ.
ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಳದಿಂದ ಆಸ್ಪತ್ರೆಗಳಲ್ಲಿ ಬೆಡ್ಡುಗಳೇ ಸಿಗದ ಪರಿಸ್ಥಿತಿ ತಲೆದೋರಿದೆ. ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಆಮ್ಲಜನಕ ಪೂರೈಕೆಗೆ ಬೇಡಿಕೆ ಹೆಚ್ಚುತ್ತಿದೆ.
ಮಧ್ಯಪ್ರದೇಶದ ಕೆಲ ಜಿಲ್ಲೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ ರೋಗಿಗಳ ಸಾವಿನ ಬಗ್ಗೆ ವರದಿಯಾಗಿವೆ ಕೆಲವಡೆ ಪ್ರತಿಭಟನೆಗಳೂ ನಡೆದಿವೆ. ಆದರೆ ರಾಜ್ಯ ಸರ್ಕಾರ ಇದನ್ನು ನಿರಾಕರಿಸಿದೆ. ರೆಮ್ಡೆಸಿವಿರ್ ಗೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏಪ್ರಿಲ್ ಅಂತ್ಯದ ವೇಳೆಗೆ ತಮ್ಮ ರಾಜ್ಯದಲ್ಲಿ 90,000 ರಿಂದ 1 ಲಕ್ಷ ಬಾಟಲ್ ಆಮ್ಲಜನಕದ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 50,000 ರಿಂದ 60,000 ಬಾಟಲ್ ಗಳು ಇವೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಎಎಪಿ ಸಚಿವರ ಉಪಸ್ಥಿತಿಯಲ್ಲಿ 'ಧರ್ಮ ಪರಿವರ್ತನೆ' ಕಾರ್ಯಕ್ರಮದ ವಿವಾದ; ಸಚಿವರ ವಜಾಕ್ಕೆ ಸಿಎಂ ಕೇಜ್ರಿವಾಲ್‌ಗೆ ಬಿಜೆಪಿ ಒತ್ತಾಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement