ಕೋಡಿಹಳ್ಳಿ ಚಂದ್ರಶೇಖರ ಅವರನ್ನು ವಶಕ್ಕೆ ಪಡೆದ ಪೊಲೀಸರು..!

posted in: ರಾಜ್ಯ | 0

ಬೆಳಗಾವಿ : ರೈತ ಮುಖಂಡ, ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತ ಮುಖಂಡರ ಹಾಗೂ ಸಾರಿಗೆ ನೌಕರರ ಜೊತೆಗೆ ಸಭೆ ಮಾಡಲು ಮುಂದಾಗಿದ್ದ  ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂತಹ ಸಂದರ್ಭದಲ್ಲಿ ಸಾರಿಗೆ ನೌಕರರ ಹೋರಾಟ ಕುರಿತಂತೆ ಬೆಳಗಾವಿ ಖಾಸಗಿ ಹೋಟೆಲ್ ನಲ್ಲಿ ಶನಿವಾರ ರೈತ ಮುಖಂಡರು ಹಾಗೂ ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ಮುಂದಾಗಿದ್ದರು. ಹೀಗಾಗಿ ಬೆಳಗಾವಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ