ಸಿಎಂ ಬಿಎಸ್‌ವೈ ಕುಳಿತ ಹಡಗು ಮುಳುಗುತ್ತಿದೆ, ಯತ್ನಾಳ ಇದಕ್ಕೆ ಸಾಕ್ಷಿ: ಸಿದ್ದರಾಮಯ್ಯ ಲೇವಡಿ

posted in: ರಾಜ್ಯ | 0

ಬೆಳಗಾವಿ: ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಒಬ್ಬ ಬಿಜೆಪಿ ಹಿರಿಯ ಮುಖಂಡ. ಅವರು ಏನು ಹೇಳುತ್ತಿದ್ದಾರೆ ಎಂದು ಮಾಧ್ಯಮಗಳಿಗೇ ಪ್ರಶ್ನಿಸಿದ ಸಿದ್ದರಾಮಯ್ಯ, ಯತ್ನಾಳ್ ಅವರ ಮಾತು ಕೇಳಿದರೆ ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ ಅಂತಾ ಅನಿಸುವುದಿಲ್ಲವೇ ಎಂದು ಪ್ರಶ್ನಿಸಿದರು.
ಸತೀಶ್ ಜಾರಕಿಹೊಳಿ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಂಗಳ ಅಂಗಡಿಗೆ ಏನು ಮಾಡಿದರು ಎಂದು ಸಿದ್ದರಾಮಯ್ಯ ಮರು ಪ್ರಶ್ನೆ ಮಾಡಿದರು. ಸಿ.ಟಿ.ರವಿ ಅವರಿಗೆಲ್ಲ ನಾವು ಉತ್ತರ ಕೊಡಬೇಕಾಗಿಲ್ಲ. ಸಿಟಿ ರವಿ ಯಾವಾಗಲೂ ಸುಳ್ಳೇ ಹೇಳುತ್ತಾರೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಓದಿರಿ :-   ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ...?

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement