ಅರುಣ್‌ ಸಿಂಗ್‌ಜಿ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಿಂದ ಉಚ್ಚಾಟಿಸಿ,ನಂತರ ನನ್ನ ಬಗ್ಗೆ ಯೋಚಿಸಿ;ಯತ್ನಾಳ

ಹುಬ್ಬಳ್ಳಿ: ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಲ್ಲಿ ಉಚ್ಚಾಟಿಸಲಿ, ಆಮೇಲೆ ನನ್ನ ಬಗ್ಗೆ ಏನು ಎಂಬ ನಿರ್ಧಾರ ಕೈಗೊಳ್ಳಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತನ್ನನ್ನು ಉಚ್ಚಾಟನೆ ಮಾಡುವುದಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿಕೆಗೆ ಪ್ರತಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟಿಸಬೇಡಿ ಎಂದು ನಾನು ಯಾರಿಗೂ ಹೇಳಿಲ್ಲ. ಹಾಗೆ ಕೇಳುವ ಮನಷ್ಯನೂ ನಾನಲ್ಲ. ಯತ್ನಾಳ ಅವರನ್ನು ಪಕ್ಷದಿಂದ ಹೊರ ಹಾಕುತ್ತೇವೆ ಎಂದು ಹೆದರಿಸಿದರೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದನ್ನು ನಿಲ್ಲಿಸುತ್ತಾರೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದ ಅವರು
ಭ್ರಷ್ಟಾಚರದಲ್ಲಿ ತೊಡಗಿರುವ ಮುಖ್ಯಮಂತ್ರಿ ಕುಟುಂಬದವರನ್ನು ಮೊದಲು ಉಚ್ಚಾಟನೆ ಮಾಡಲಿ. ಆ ಮೇಲೆ ಯತ್ನಾಳರ ಬಗ್ಗೆ ಯೋಚನೆ ಮಾಡಲಿ ಎಂದರು. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು, ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೇ ಹೊರತು ಯಡಿಯೂರಪ್ಪ, ವಿಜಯೇಂದ್ರ ಅವರ ಕಾರ್ಯದರ್ಶಿ ಅಲ್ಲ. ಯಡಿಯೂರಪ್ಪ ಅವರ ಮೊಮ್ಮಕ್ಕಳು ಬಂದು ವರ್ಗಾವಣೆಗೆ ಅರ್ಜಿ ಹಿಡಿದು ನಿಲ್ಲುವ ಕಾಲ ದೂರವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರಮುಖ ಸುದ್ದಿ :-   ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement