ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 12 ರ ನಂತರ ಮಳೆ ಬಿರುಸುಗೊಳ್ಳಲಿದ್ದು, ಏಪ್ರಿಲ್ 14, 15 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಏಪ್ರಿಲ್ 14, 15 ರಂದು ಗುಡುಗು-ಮಿಂಚು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ಚಿತ್ರದುರ್ಗ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ ಮೊದಲಾದ ಕಡೆ ಏಪ್ರಿಲ್ 13 ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು ನಂತರದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement