ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ರಿಯಾಜ್‌ ಬಂಧಿಸಿದ ಎನ್‌ಐಎ

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್‌ ಅಧಿಕಾರಿ ರಿಯಾಜ್‌ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧಿಸಿದೆ.
ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್‌ ವಾಜೆ ಅವರಿಗೆ ರಿಯಾಜ್‌ ಸಹಕಾರ ನೀಡಿದ್ದರುಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.
ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕ ತುಂಬಿದ ವಾಹನ ಪತ್ತೆ ಪ್ರಕರಣ ಮತ್ತು ಉದ್ಯಮಿ ಮನ್‌ಸುಖ್‌ ಹಿರೆನ್ ಸಾವಿನ ಪ್ರಕರಣದಲ್ಲಿ ಎನ್‌ಐಎ ಕಳೆದ ತಿಂಗಳು ಸಚಿನ್ ವಾಜೆ ಅವರನ್ನು ಬಂಧಿಸಿತ್ತು. .
ರಿಯಾಜ್‌ ಕೂಡ ಅಸಿಸ್ಟೆಂಟ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ಆಗಿದ್ದಾರೆ. ಮಾರ್ಚ್‌ 5ರಂದು ಶವವಾಗಿ ಪತ್ತೆಯಾದ ಉದ್ಯಮಿ ಹಿರೆನ್‌ ಅವರ ಸ್ಕಾರ್ಪಿಯೊ ಕಾರನ್ನು ಸಚಿನ್‌ ವಾಜೆ ಬಾಂಬ್‌ ಬೆದರಿಕೆಗಾಗಿ ಬಳಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ಸ್ಫೋಟಕಗಳಿದ್ದ ಕಾರು ಫೆಬ್ರುವರಿ 25ರಂದು ಮುಕೇಶ್‌ ಅಂಬಾನಿ ನಿವಾಸ ಆಂಟಿಲಿಯಾ ಮುಂಭಾಗದಲ್ಲಿ ಪತ್ತೆಯಾಗಿತ್ತು. ಆ ಪ್ರಕರಣಗಳಲ್ಲಿ ಸಚಿನ್‌ರನ್ನು ಮಾರ್ಚ್‌ 13ರಂದು ಎನ್‌ಐಎ ಬಂಧಿಸಿತ್ತು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement