ಕರ್ನಾಟಕದಲ್ಲಿ 10 ಸಾವಿರ ದಾಟಿದ ಏಕದಿನದ ಕೊರೊನಾ ಸ್ಟ್ರೈಕ್‌..! ಬೆಂಗಳೂರಲ್ಲೇ 7 ಸಾವಿರ ದಾಟಿದ ಪ್ರಕರಣ..!!

posted in: ರಾಜ್ಯ | 0

ಬೆಂಗಳೂರು:‌ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಭಾನುವಾರ ದೈನಂದಿನ ಪ್ರಕರಣ 10 ಸಾವಿರ ದಾಟಿದೆ..!
ಭಾನುವಾರ ಕರ್ನಾಟಕದಲ್ಲಿ ದೈನಂದಿನ 10,250 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 10,65,290 ಕ್ಕೆ ಏರಿಕೆಯಾಗಿದೆ. ಭಾನುವಾರ ಕೊರೊನಾ ಸೋಂಕಿಗೆ 40 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,889 ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ 2638 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವ್ರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ 69,225 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 440 ಮಂದಿ ತೀವ್ರ ನಿಗಾ ಘಟಕಗಳಲ್ಲಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಬರೋಬ್ಬರಿ 7584 ಕೇಸ್ ಪತ್ತೆಯಾಗಿದ್ದು, 17 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 1184 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ