ಮಾತುಕತೆಗೆ ಕರೆಯಲ್ಲ, ಮುಷ್ಕರ ಕೈಬಿಡದ್ದರೆ ಶಿಸ್ತು ಕ್ರಮ:ಸಿಎಂ ಬಿಎಸ್‌ವೈ ಎಚ್ಚರಿಕೆ

ರಾಯಚೂರು:ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್‌ ನೀಡಿದ್ದಾರೆ.
ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ವೇತನ ಕಡಿತ ಮಾಡುವುದಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿದಂತೆ ಯಾರನ್ನೂ ಕೂಡಾ ಮಾತುಕತೆಗೆ ಕರೆಯುವುದಿಲ್ಲ. ನೌಕರರು ಕರ್ತವ್ಯಕ್ಕೆ ಹಾಗಜರಾಗಬೇಕು. ಬಸ್‌ಗಳನ್ನು ಓಡಿಸದೇ ಇದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಹಾಗೂ ತೆಗೆದುಕೊಳ್ಳುವ ಶಿಸ್ತುಕ್ರಮಕ್ಕೆ ಅವರೇ ಹೊಣೆ”ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಭಾನುವಾರ ಬೆಳಿಗ್ಗೆ ಕರೆ ಮಾಡಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಉದ್ಭವಿಸಿದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಹಲವು ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement