ಬಿಎಸ್‌ವೈಗೆ ಭಾನುವಾರ ಬೆಳ್ಳಂ ಬೆಳಿಗ್ಗೆ ದೂರವಾಣಿ ಕರೆ ಮಾಡಿದ ಮೋದಿ ..

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ  ಕರೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ದೂರವಾಣಿ ಕರೆ ಮಾಡಿದ್ದ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕರ್ನಾಟಕದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.
ರಾಯಚೂರು ಜಿಲ್ಲೆಯ ಮಸ್ಕಿಯಲ್ಲು ಉಪಚುನಾವಣೆ ಪ್ರಚಾರದಲ್ಲಿರುವ ಯಡಿಯೂರಪ್ಪ ಅವರ ಜೊತೆ ಮೋದಿ ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿ ಕೊರೊನಾ ಸೋಂಕು ತಡೆಗಟ್ಟಲು ಕೆಲವು ಅಮೂಲ್ಯವಾದ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಕಳೆದ ಎರಡು ವಾರಗಳಿಂದ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಅನ್ವಯವಾಗುವಂತೆ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಮುಂಜಾನೆ 5ರ ವರೆಗೆ ಕೊರೊನಾ ಕರ್ಫ್ಯೂ ವಿಧಿಸಲಾಗಿದೆ. ಅಗತ್ಯಬಿದ್ದರೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕಕ್ಕೆ ಎಲ್ಲ ರೀತಿಯ ಸಹಕಾರ ಕೊಡಲಿದೆ. ಕೊರೊನಾ ನಿಯಂತ್ರಣಕ್ಕೆ ಬರುವ ವರೆಗೂ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕು.ಎಂದು ಪ್ರಧಾನಿಯವರು ಸಲಹೆ ಮಾಡಿದ್ದಾರೆ.
ಕಂಟೋನ್ಮೆಂಟ್ ವಲಯದಲ್ಲಿ ಇನ್ನಷ್ಟು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ. ಅಗತ್ಯ ಕಂಡುಬಂದರೆ ಕೇಂದ್ರದಿಂದ ನೆರವು ಪಡೆಯಲು ಹಿಂದೆಮುಂದೆ ನೋಡಬೇಡಿ. ಸಾರ್ವಜನಿಕರ ಆರೋಗ್ಯವು ಮುಖ್ಯ ಎಂದು ಮೋದಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement