ಇದೆಂಥ ನಿರ್ಲಕ್ಷ್ಯ.. ಜೀವಂತ ವ್ಯಕ್ತಿಯನ್ನು ಮೃತನೆಂದು ಘೋಷಿಸಿ ಬೇರೊಂದು ಶವ ನೀಡಿದ ಆಸ್ಪತ್ರೆ ಸಿಬ್ಬಂದಿ..!!

ಪಟ್ನಾ: ಜೀವಂತ ಕೋವಿಡ್‌ ರೋಗಿ ಮೃತಪಟ್ಟಿದ್ದಾರೆಂದು ಘೋಷಿಸಿ, ಮತ್ತೊಬ್ಬ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ನೀಡಿದ ಘಟನೆ ಪಟ್ನಾದಲ್ಲಿ ನಡೆದಿದೆ.
ಕೊರೊನಾ ಸೋಂಕಿನಿಂದಾಗಿ ಪಟ್ನಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಮಹ್ಮದಪುರ ಗ್ರಾಮದ ಚುನ್ನುಕುಮಾರ ದಾಖಲಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆಂದು ಘೋಷಿಸಿದ ಆಸ್ಪತ್ರೆ ಸಿಬ್ಬಂದಿ ಬೇರೊಬ್ಬ ವ್ಯಕ್ತಿಯ ಶವ ನೀಡಿದರು.
ವಿಷಯ ಗೊತ್ತಾಗುತ್ತಿದ್ದಂತೆಯೇ ಪಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಚಂದ್ರಶೇಖರ ಸಿಂಗ್‌ ತನಿಖೆ ನಡೆಸಿ ತಪ್ಪು ಮಾಡಿದ ಸಿಬ್ಬಂದಿ ಮೇಲೆ ೨೪ ಗಂಟೆಗಳಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಸ್ಪತ್ರೆಯ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ