ಕರ್ನಾಟಕದಲ್ಲಿ ಸೋಮವಾರ ಹತ್ತು ಸಾವಿರಕ್ಕಿಂತ ತುಸು ಕಡಿಮೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಸೋಮವಾರ 9,579 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಸೋಮವಾರ 6,387 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,88,369ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸೋಂಕಿಗೆ 40 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 2,767 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,85,924ಕ್ಕೆ ಏರಿಕೆಯಾಗಿದೆ. 75,985 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 470 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 6,387, ಬೀದರ್ 465, ಮೈಸೂರು 362, ಕಲಬುರಗಿ 335, ತುಮಕುರು 239 ಜನರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement