ಕೊರೊನಾ ಉಲ್ಬಣ: ಸರ್ವಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್‌ ಆಗುತ್ತಾ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯವಾಗುತ್ತದೆ ಎಂದು ಹೇಳಿದರು.
ಸರವಪಕ್ಷಗಳ ಸಭೆಯಲ್ಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು.
ಕೊರೊನಾ ಕುರಿತಾಗಿ ಜನರು ಹೆಚ್ಚು ಜಾಗೃತರಾಗಿರಬೇಕು. ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು. ಜನರು ಸಹಕರಿಸದಿದ್ದರೆ ಅನಿವಾರ್ಯವಾಗಿ ಲಾಕ್ ಡೌನ್ ಮೊರೆ ಹೋಗಬೇಕಾದ ಸ್ಥಿತಿ ಬರಬಹುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement