ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:ಸೋನಿಯಾ, ರಾಹುಲ್‌ಗೆ ಪ್ರತಿಕ್ರಿಯೆ ದಾಖಲಿಸಲು ಇನ್ನಷ್ಟು ಕಾಲಾವಕಾಶ ನೀಡಿದ ಹೈಕೋರ್ಟ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳಿಗೆ ಪ್ರತಿಕ್ರಿಯೆ ದಾಖಲಿಸಲು ದೆಹಲಿ ಉಚ್ಚ ನ್ಯಾಯಾಲಯ ಇನ್ನಷ್ಟು ಕಾಲಾವಕಾಶ ನೀಡಿದೆ.
ಬಿಜೆಪಿ ಸಂಸದ ಸುಬ್ರಮಣಿಯನ್‌ಸ್ವಾಮಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ನ್ಯಾಯಮೂರ್ತಿ ಸುರೇಶಕುಮಾರ ಅವರು ಪ್ರಕರಣದ ವಿಚಾರಣೆಯನ್ನು ಮೇ ೧೮ರಂದು ನಿಗದಿಪಡಿಸಿದರು. ಹಿರಿಯ ವಕೀಲರಾದ ಆರ್‌.ಎಸ್‌.ಚೀಮಾ, ತನುನ್ನಮ್‌ ಚೀಮಾ ಕಾಂಗ್ರೆಸ್‌ ಮುಖಂಡರ ಪರವಾಗಿ ವಿಚಾರಣೆಗೆ ಹಾಜರಿದ್ದರು. ಕೊರೊನಾ ಕಾರಣದಿಂದಾಗಿ ಅವರ ಕಚೇರಿ ಮುಚ್ಚಿದ್ದು, ಪ್ರತಿಕ್ರಿಯೆ ದಾಖಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.
ಪ್ರತಿಕ್ರಿಯೆ ದಾಖಲಿಸಲು ಫೆಬ್ರವರಿ ೨೨ರಂದು ನೊಟೀಸ್‌ ನೀಡಿದ್ದ ಉಚ್ಚ ನ್ಯಾಯಾಲಯ, ಅಲ್ಲಿಯವರೆಗೆ ವಿಚಾರಣೆಗೆ ತಡೆಯೊಡ್ಡಿತ್ತು. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್‌ ಫರ್ನಾಂಡಿಸ್‌, ಸುಮನ್‌ ದುಬೆ, ಸ್ಯಾಮ್‌ ಪಿತ್ರೊಡಾ ಅವರಿಗೆ ನೊಟೀಸ್‌ ನೀಡಲಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement