ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ನೇಮಕ

ನವ ದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅವರು ಏಪ್ರಿಲ್ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಏಪ್ರಿಲ್ 13ರಿಂದ ಜಾರಿಗೆ ಬರುವಂತೆ ಸುಶಿಲ್ ಚಂದ್ರ ಅವರನ್ನು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಿಸಲಾಗಿದೆ. ಲೋಕಸಭೆ ಚುನಾವಣೆಗೆ ಮೊದಲು ಫೆಬ್ರವರಿ 14, 2019 ರಂದು ಚುನಾವಣೆ ಆಯುಕ್ತರನ್ನಾಗಿ ಅವರನ್ನು ನಿಯೋಜಿಸಲಾಗಿತ್ತು. ಚುನಾವಣಾ ಆಯುಕ್ತರಾಗುವ ಮೊದಲು ಸುಶಿಲ್ ಚಂದ್ರ ಕೇಂದ್ರ ನೇರ ತೆರಿಗೆ ಮಂಡಳಿ ಅಧ್ಯಕ್ಷರಾಗಿದ್ದರು. ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಂಗಳವಾರ ಅಧಿಕಾರದಿಂದ ನಿರ್ಗಮಿಸಲಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ