ವರ್ಗಾವಣೆಗೊಂಡ ಸಾರಿಗೆ ಸಂಸ್ಥೆ ನೌಕರರಿಗೆ ಕೆಲಸಕ್ಕೆ ಹಾಜರಾಗಲು ಸೂಚನೆ

ಬೆಂಗಳೂರು: ಸಾರಿಗೆ ನೌಕರರಿಗೆ ಅನುಕೂಲತೆ ಕಲ್ಪಿಸಲು ವರ್ಗಾವಣೆ ಮಾಡಿದ್ದರೂ ಕೆಲಸಕ್ಕೆ ಹಾಜರಾಗದ ನೌಕರರ ವರ್ಗಾವಣೆ ರದ್ದುಪಡಿಸಲಾಗುವುದಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಾ ಬಾಜಪೇಯಿ ಸೂಚಿಸಿದ್ದಾರೆ.
೨೦೧೯-೨೦ ಹಾಗೂ ೨೦೨೦-೨೧ ಸಾಲಿನಲ್ಲಿ ಸಿಬ್ಬಂದಿಗಳ ಕೋರಿಕೆಯಂತೆ ದೂರದ ಘಟಕಗಳಿಗೆ ಅಲೆದಾಟ ತಪ್ಪಿಸಲು, ಆರ್ಥಿಕ ನಷ್ಟ ತಪ್ಪಿಸುವ ಉದ್ದೇಶದಿಂದ ನೌಕರರ ಸ್ವಂತ ಊರಿಗೆ ಸಮೀಪದ ಘಟಕಗಳಿಗೆ ವರ್ಗಾವಣೆ ಮಾಡಿ ನಿಯೋಜಿಸಲಾಗಿದೆ. ಆದರೂ ಎಪ್ರಿಲ್‌ ೭ರಿಂದ ಕೆಲ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ. ಯಾವುದೇ ರೀತಿಯ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಗೈರುಹಾಜರಾಗಿರುವುದರಿಂದ ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ವರ್ಗಾವಣೆಗೊಂಡು ನಿಯೋಜಿತ ಸ್ಥಳದಲ್ಲಿ ಹಾಜರಾದ ಸಿಬ್ಬಂದಿಗಳು ಹಾಗೂ ವರ್ಗಾವಣೆ ಆದೇಶವಾಗಿ ಇನ್ನೂ ವಿಭಾಗಗಳಿಂದ ಬಿಡುಗಡೆಯಾಗದ ಸಿಬ್ಬಂದಿಗಳು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಘಟಕಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು. ಒಂದು ವೇಳೆ ಕೆಲಸಕ್ಕೆ ಹಾಜರಾಗದಿದ್ದರೆ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ವರ್ಗಾವಣೆ ರದ್ದುಪಡಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಹಾವಿನಿಂದಾಗಿ ಕೆಲಕಾಲ ಸ್ಥಗಿತಗೊಂಡ ಭಾರತ -ದಕ್ಷಿಣ ಆಫ್ರಿಕಾ ನಡುವಿನ ಎರಡನೇ 2ನೇ ಟಿ 20 ಪಂದ್ಯ... ವೀಕ್ಷಿಸಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement