ಮಮತಾ ಬ್ಯಾನರ್ಜಿಗೆ ಶಾಕ್‌ ನೀಡಿದ ಚುನಾವಣಾ ಆಯೋಗ..!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಗೆ 24 ಗಂಟೆಗಳ ಕಾಲ ಪ್ರಚಾರದಿಂದ ನಿಷೇಧಿಸಿ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.
ಸಿಆರ್ ಪಿಎಫ್ ಯೋಧರನ್ನು ಸುತ್ತುಗಟ್ಟಿ ಎಂದು ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಆಧರಿಸಿ ಕೇಂದ್ರ ಚುನಾವಣಾ ಆಯೋಗ ಭಾನುವಾರ ಈ ಆದೇಶ ಹೊರಡಿಸಿದ್ದು, ಸೋಮವಾರ ರಾತ್ರಿ 8 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದೆ.
ಮಮತಾ ಬ್ಯಾನರ್ಜಿ ಅವರ ಹೇಳಿಕೆ ಅತ್ಯಂತ ಗಂಭೀರವಾಗಿದ್ದು, ಈ ಹೇಳಿಕೆ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.ಈ ಆದೇಶದ ವಿರುದ್ಧ ಮಮತಾ ಬ್ಯಾನರ್ಜಿ ಮಂಗಳವಾರ ಧರಣಿಯಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ತಿಳಿಸಿವೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನಿಮ್ಮ ಕಾಮೆಂಟ್ ಬರೆಯಿರಿ

advertisement