ಲೋಕಾಯುಕ್ತದಿಂದ ಪ್ರತಿಕೂಲ ವರದಿ: ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌ ರಾಜೀನಾಮೆ

ತಿರುವನಂತಪುರಂ: ಕೇರಳ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ ಸಂಬಂಧಿಯೊಬ್ಬರಿಗೆ ಉದ್ಯೋಗ ಕೊಡಿಸಲು ತಮ್ಮ ಸಚಿವ ಹುದ್ದೆಯ ಪ್ರಭಾವ ಬಳಸಿರುವ ಬಗ್ಗೆ ಲೋಕಾಯುಕ್ತರಿಂದ ಅವರಿಗೆ ಸೋಮವಾರ ಪ್ರತಿಕೂಲ ವರದಿ ಬೆನ್ನಲ್ಲೇ ಅವರು ಮಂಗಳವಾರ ರಾಜೀನಾಮೆ ಪ್ರಕಟಿಸಿದ್ದಾರೆ.
ಈ ಹಿಂದೆ ಯುಎಇಯಿಂದ ಚಿನ್ನ ಸ್ಮಗ್ಲಿಂಗ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಹಾಗೂ ಇತರರಿಗೆ ನೆರವಾದ ಆರೋಪದ ಮೇಲೆ ಜಲೀಲ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಜಲೀಲ್ ಅವರ ಸೋದರ ಸಂಬಂಧಿ ಆದೀಬ್ ಎಂಬುವವರಿಗೆ ಕೇರಳ ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಜನರಲ್ ಮ್ಯಾನೇಜರ್ ಆಗಿ ನೇಮಕ ಮಾಡಲಾಗಿದೆ ಎಂದು ಮುಸ್ಲಿಂ ಲೀಗ್ ನಾಯಕರು 2018ರಲ್ಲಿ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಮತ್ತು ಆಪ್ತರಿಗೆ ಸಹಾಯ ಮಾಡಿದ ಆರೋಪಗಳು ಸಾಬೀತಾಗಿದೆ ಎಂದು ಲೋಕಾಯುಕ್ತ ಪೀಠ ಅಭಿಪ್ರಾಯಪಟ್ಟಿದೆ.
ತಮ್ಮ ರಾಜೀನಾಮೆಯನ್ನು ಕೆ.ಟಿ. ಜಲೀಲ್, ಫೇಸ್‌ಬುಕ್ ಪೋಸ್ಟ್‌ನಲ್ಲಿ ಖಚಿತಪಡಿಸಿದ್ದಾರೆ. ಲೋಕಾಯುಕ್ತ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿ ಕೇರಳ ಹೈಕೋರ್ಟ್‌ಗೆ ಸೋಮವಾರ ಮನವಿ ಅರ್ಜಿ ಸಲ್ಲಿಸಿದ ಬಳಿಕ ಈ ಬೆಳವಣಿಗೆಗಳು ನಡೆದಿವೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement