ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

posted in: ರಾಜ್ಯ | 0

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಗಣೇಶಗುಡಿ ಸೇತುವೆಯ ಮೇಲೆ ಸೋಮವಾರ ಮೊಬೈಲ್ ಫೋನ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದಿದ್ದರು ಎಂದು ಹೇಳಲಾದ ಪ್ರೇಮಿಗಳ ಮೃತದೇಹಗಳು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.
ಸೋಮವಾರ ಸಂಜೆಯಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ.
ಕೊನೆಗೆ ಮಂಗಳವಾರ ಬೆಳಿಗ್ಗೆ ಗಣೇಶಗುಡಿಯ ಫ್ಲೈ ಕ್ಯಾಚರ್ ರೆಸಾರ್ಟ್ ಸಿಬ್ಬಂದಿ ಸಹಕಾರದಿಂದ ಇಬ್ಬರ ಮೃತದೇಹಗಳು ಪತ್ತೆಯಾಯಿತು.
ಮೃತಪಟ್ಟ ಯುವಕ ಬೀದರಿನ ಪರುಷೋತ್ತಮ ಪಾಟೀಲ ಎಂದು ಗುರುತಿಸಲಾಗಿದ್ದು, ಬೀದರಿನ ಕರ್ನಾಟಕ ಕಾಲೇಜಿನಲ್ಲಿ ಡಗ್ರಿ ಓದುತ್ತಿದ್ದ ಎಂದು ಹೇಳಲಾಗಿದೆ. ಯುವತಿಯೂ ಬೀದರಿನ ರಕ್ಷಿತಾ ಎಂದು ಗುರುತಿಸಲಾಗಿದ್ದು ಈಕೆ ಎಂಜಿನಿಯರಿಂಗ್‌ ಪದವಿ ಓದುತ್ತಿದ್ದಳು ಎಂದು ಹೇಳಲಾಗಿದೆ.
ಇವರು ಸೆಲ್ಫಿ ತೆಗೆದುಕೊಳ್ಳುವಾಗ ಬಿದ್ದಿದ್ದಾರೆ ಎಂದು ಹೇಳಲಾಗಿದ್ದರೂ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವೇ ಗೊತ್ತಾಗಲಿದೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement