ತನಗೆ ಕೊರೊನಾ ಸೋಂಕು ದೃಢಪಟ್ಟ ಸುದ್ದಿಕೇಳಿ ವಿದ್ಯುತ್‌ ಕಂಬಕ್ಕೆ ಕಾರು ಗುದ್ದಿದ ಮಹಿಳೆ

ಕೊಲ್ಲಂ: ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಸಂದೇಶ ತಿಳಿದ ಮಹಿಳೆಯೊಬ್ಬಳು ನಿಯಂತ್ರಣ ಕಳೆದುಕೊಂಡು ಆತಂಕಕ್ಕೊಳಗಾಗಿ ಕಾರನ್ನು ವಿದ್ಯುತ್‌ ಕಂಬಕ್ಕೆ ಗುದ್ದಿದ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕಡಕ್ಕಲ್‌ನಲ್ಲಿ ನಡೆದಿದೆ.
ಮುಖಕ್ಕೆ ಸಣ್ಣ ಪುಟ್ಟ ಗಾಯಗಳೊಂದಿಗೆ ೪೦ ವರ್ಷದ ಮಹಿಳೆ ಪಾರಾಗಿದ್ದಾಳೆ. ಕಾರು ಚಾಲನೆ ಮಾಡುತ್ತಿದ್ದಾಗ ಅವಳ ಮೊಬೈಲ್‌ಗೆ ಕೊರೊನಾ ಸೋಂಕು ದೃಢಪಟ್ಟಿರುವ ಸಂದೇಶ ಬಂದ ನಂತರ ಘಟನೆ ನಡೆದಿದೆ. ಅವಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಆಂಬುಲೆನ್ಸ್‌ಗಳಲ್ಲಿ ಅವಳನ್ನು ಆಸ್ಪತ್ರೆಗೆ ಸಾಗಿಸಲು ನಿರಾಕರಿಸಲಾಯಿತು. ಇದರಿಂದಾಗಿ ಮಹಿಳೆ ಒಂದು ಗಂಟೆ ಕಾಲ ರಸ್ತೆಯಲ್ಲಿಯೇ ಉಳಿಯಬೇಕಾಯಿತು. ನಂತರ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್‌ ಮಹಿಳೆಗೆ ನೀಡಿದ ನಂತರ ಮಹಿಳೆಯ ಸಂಬಂಧಿಕರು ಖಾಸಗಿ ಕಾರಿನಲ್ಲಿ ಮಹಿಳೆಯನ್ನು ಮನೆಗೆ ಕರೆದೊಯ್ದರು.
ಮಂಗಳವಾರ ಕೇರಳದಲ್ಲಿ 7,515 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 52,132 ಕ್ಕೆ ತಲುಪಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಜಮ್ಮು-ಕಾಶ್ಮೀರ ಕಾರಾಗೃಹಗಳ ಡಿಜಿಪಿ ಗಂಟಲು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ: ಹತ್ಯೆ ಹೊಣೆ ಹೊತ್ತುಕೊಂಡ ಭಯೋತ್ಪಾದಕ ಸಂಘಟನೆ ಪಿಎಎಫ್‌ಇ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement