ದೇಶದಲ್ಲಿ ಮತ್ತೆ ಲಾಕ್‌ಡೌನ್‌ ಇಲ್ಲ

ನವ ದೆಹಲಿ: ಮತ್ತೆ ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆದರೆ ದೇಶದಲ್ಲಿ ಯಾವುದೇ ಕಾರಣಕ್ಕೂ ಎಂದು ಲಾಕ್‌ಡೌನ್‌ ಮಾಡುವುದಿಲ್ಲ ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಲಾಕ್‌ಡೌನ್‌ ಬದಲಿಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು, ಆದರೆ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವ ಆಯ್ಕೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸ್ಥಳೀಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ದೇಶದ ಆರ್ಥಿಕ ಚಟುವಟಿಕೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಕಳೆದ ೨೪ ಗಂಟೆಯಲ್ಲಿ ೧೮೪,೩೭೨ ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ . ಈ ಮೂಲಕ ಸೋಂಕಿತರ ಸಂಖ್ಯೆ ೧,೩೮,೭೩,೮೨೫ ಕ್ಕೆ ಏರಿಕೆಯಾಗಿದೆ.ಸೋಂಕಿಗೆ ಒಟ್ಟು ೧,೦೨೭ ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ೧,೭೨,೦೮೫ ಕ್ಕೆ ಏರಿದೆ.
ಮಹಾರಾಷ್ಟ್ರ.ದೆಹಲಿ, ಉತ್ತರ ಪ್ರದೇಶ, ಕರ್ನಾಟಕ, ಪಂಜಾಬ್, ಕೇರಳ ತಮಿಳುನಾಡು, ಪಶ್ಚಿಮ ಬಂಗಾಳ,ಗುಜರಾತ್‌, ಮಧ್ಯಪ್ರದೇಶ ಛತ್ತೀಸ್ ಗಡ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೊರೊನಾ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ.
ಅದರಲ್ಲಿಯೂ ಮಹಾರಾಷ್ಟ್ರದಲ್ಲಿರುವ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅನಿವಾರ್ಯ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಅಂತಹ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ