ಪರಿಸ್ಥಿತಿ ಕೈಮೀರಿದ ಮೇಲೆ ಸರ್ವಪಕ್ಷಗಳ ಸಭೆ ಕರೆದ ಸಿಎಂ; ಡಿಕೆಶಿ ಟೀಕೆ

ಬೆಂಗಳೂರು: ಕೋವಿಡ್ ಚರ್ಚೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಮುಖ್ಯಮಂತ್ರಿಗಳು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಭೆ ಎನ್ನುವುದು ವೈಯಕ್ತಿಕ ವಿಚಾರವಲ್ಲ. ಇದು ರಾಜ್ಯ ವಿಚಾರ. ಸರ್ಕಾರ ಇಲ್ಲಿಯ ವರೆಗೆ ಕೋವಿಡ್ ಕುರಿತ ನಮ್ಮ ಒಂದೂ ಮಾತನ್ನೂ ಕೇಳಿಲ್ಲ ಎಂದು ಟೀಕಿಸಿದ್ದಾರೆ.
ಪರಿಸ್ಥಿತಿ ಕೈ ಮೀರಿ ಹೋಗಿದ್ದು, ಈಗ ಸಭೆ ಕರೆದಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಜನ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಲಾಕ್ಡೌನ್ ಅವಶ್ಯಕತೆಯಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಒಂದು ಕಡೆ ಜೀವ‌ ಮತ್ತು ಜೀವನದ ಪ್ರಶ್ನೆಯಾಗಿರುವುದರಿಂದ ಕೋವಿಡ್ ಪಸರಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿ. ಉದ್ಯೋಗಿಗಳು, ಕಾರ್ಮಿಕರು, ಹೊಟೇಲ್ ಉದ್ಯಮಗಳ ನಷ್ಟ, ಜನರ ಆರ್ಥಿಕ ಸಂಕಷ್ಟಕ್ಕೆ ಸರ್ಕಾರ ನೆರವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಲಹೆ ನೀಡಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement