ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥಗೆ ಕೊರೊನಾ ಸೋಂಕು

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅವರು ಕ್ವಾರಂಟೈನ್‌ ಆಗಿದ್ದೇನೆ ಎಂದು ಬುಧವಾರ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ. ಅವರ ಕಚೇರಿಯ ಕೆಲವು ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್‌ಗೆ ಒಳಗಾಗಿ ಒಂದು ದಿನದ ನಂತರ ಈ ಪ್ರಕಟಣೆ ಬಂದಿದೆ.
ರಾಜ್ಯ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ಸಾಮಾನ್ಯವಾಗಿ ನಡೆಸಲಾಗುತ್ತಿದೆ ಮತ್ತು ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ತಮ್ಮನ್ನು ಪರೀಕ್ಷೆಗೆ ಒಳಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
“ಆರಂಭಿಕ ರೋಗಲಕ್ಷಣಗಳು ಕಂಡುಬಂದಿದೆ, ನಾನು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದೇನೆ ಮತ್ತು ನನ್ನ ವರದಿ ಪಾಸಿಟಿವ್‌ ಬಂದಿದೆ. ನಾನು ಸ್ವಯಂ-ಪ್ರತ್ಯೇಕತೆಯಲ್ಲಿದ್ದೇನೆ ಮತ್ತು ವೈದ್ಯರ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಿದ್ದೇನೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕೊರೊನಾ ಸೋಂಕಿಗೆ ಒಳಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement