ಕೊರೊನಾ ಸಾಂಕ್ರಾಮಿಕ ಹರಡಿದ ನಂತರ ದೆಹಲಿಯಲ್ಲಿ ಅತಿಹೆಚ್ಚು ಏಕದಿನ ಪ್ರಕರಣ ದಾಖಲು.!!

ನವ ದೆಹಲಿ: ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ನಂತರ ಇದೇ ಮೊದಲ ಬಾರಿಗೆ ದೆಹಲಿಯು ಈ ವರೆಗಿನಾತಿಹೆಚ್ಚು ದೈನಂದಿನ ಪ್ರಕರಣಗಳನ್ನು ಬುಧವಾರ ದಾಖಲಿಸಿದೆ.
ಕಳೆದ 24 ಗಂಟೆಗಳಲ್ಲಿ ದೆಹಲಿಯು17,282 ಹೊಸ ಪ್ರಕರಣಗಳನ್ನುವರದಿ ಮಾಡಿದೆ. ದೆಹಲಿಯ ಒಟ್ಟು ಸೋಂಕಿತರ ಸಂಖ್ಯೆ 7,67,438 ಕ್ಕೆ ಏರಿದೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ.ರಾಷ್ಟ್ರ ರಾಜಧಾನಿ ಕಳೆದ 24 ಗಂಟೆಗಳಲ್ಲಿ 100 ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ. ಬುಧವಾರ 104 ವೈರಸ್‌ಗೆ ಸಂಬಂಧಿಸಿದ ಸಾವುನೋವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 11,540 ಕ್ಕೆ ತಲುಪಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ನಗರದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 50,736 ಕ್ಕೆ ಏರಿದೆ. ನಗರದಲ್ಲಿ ಸಂಚಿತ ಸಕಾರಾತ್ಮಕ ದರವು 15.92%ಕ್ಕೆ ಏರಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 9,952 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದು, ಚೇರಿಕೆಯಅದವರ ಸಂಖ್ಯೆ ಒಟ್ಟು ಸಂಖ್ಯೆ 7,05,162 ಕ್ಕೆ ಏರಿದೆ. ಮತ್ತು ಚೇತರಿಕೆಯ ಪ್ರಮಾಣವು ಶೇಕಡಾ 92.67 ಕ್ಕೆ ತಲುಪಿದೆ.ಭಾನುವಾರ, ನಗರದಲ್ಲಿ 10,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿದ್ದರೆ, ಸೋಮವಾರ 11,000 ಕ್ಕೂ ಹೆಚ್ಚು ಪ್ರಕರಣಗಳು ಮತ್ತು ಮಂಗಳವಾರ 13,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್‌ -19 ಪ್ರಕರಣಗಳು ಮುಂದುವರೆದಂತೆ, ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಶೇಕಡ 15 ರಿಂದ 25 ಕ್ಕೆ ಹೆಚ್ಚಿಸಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement