ಶುಕ್ರವಾರ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆ:ಡಿಸಿಎಂ ಸವದಿ

posted in: ರಾಜ್ಯ | 0

ಬೀದರ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕೆಲಸಕ್ಕೆ ಮರಳುವಂತೆ ನೌಕರರಿಗೆ ಸರ್ಕಾರ ಮತ್ತೊಮ್ಮೆ ಮನವಿ ಮಾಡುತ್ತಿದೆ. ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರ ಕಠಿಣ ಆರ್ಥಿಕ ಸ್ಥಿತಿ ಎದುರಿಸುತ್ತಿದೆ. ಗುರುವಾರ ಬೆಳಗ್ಗೆ ಹೆಚ್ಚಿನ ನೌಕರರು ಕೆಲಸಕ್ಕೆ ಮರಳಿದ್ದಾರೆ. ಗುರುವಾರ ಬೆಳಗ್ಗೆಯಿಂದ 2,500 ಬಸ್ ಗಳು ಸಂಚರಿಸುತ್ತಿವೆ. ಕರ್ತವ್ಯಕ್ಕೆ ಹಾಜರಾಗಲು ಹೆಚ್ಚಿನ ಸಂಖ್ಯೆಯ ನೌಕರರು ಮುಂದೆ ಬರುತ್ತಿದ್ದು, ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಮುಷ್ಕರದ ವೇಳೆ ಕಲ್ಲು ತೂರಾಟ ಮತ್ತು ಇತರ ಘಟನೆಗಳಿಂದಾಗಿ 59ಕ್ಕೂ ಹೆಚ್ಚು ಬಸ್ ಗಳು ಹಾನಿಗೀಡಾಗಿವೆ. ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಕಾನೂನಿನಂತೆ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಎಚ್ಚರಿಸಿದರು.
ನೌಕರರು ಮುಷ್ಕರ ಮುಂದುವರಿಸಿದರೆ, ಹೆಚ್ಚಿನ ಖಾಸಗಿ ಬಸ್ ಗಳನ್ನು ಪರ್ಯಾಯವಾಗಿ ಬಳಸಿಕೊಳ್ಳಲಾಗುವುದು. ಗುರುವಾರದ ವರೆಗೆ 24,000 ಖಾಸಗಿ ಬಸ್ ಗಳನ್ನು ಸಾರ್ವಜನಿಕ ಸೇವೆಗಳಿಗೆ ಬಳಸಿಕೊಳ್ಳಲಾಗಿದೆ.
ಕೊರೊನಾದಿಂದಾಗಿ ಈಗಾಗಲೇ ಭಾದಿತವಾಗಿರುವ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಬೆಳವಣಿಗೆಯ ಮೇಲೆ ಇಂತಹ ಮುಷ್ಕರಗಳು ಇನ್ನಷ್ಟು ಪ್ರತಿಕೂಲ ಪರಿಣಾಮ ಬೀರುತ್ತವೆ ಎಂಬುದನ್ನು ನೌಕರರು ಅರಿತುಕೊಳ್ಳಬೇಕು. ಸಾಂಕ್ರಾಮಿಕ ಸಮಯದಲ್ಲಿ ಸಹ ಸಂಬಳ ಮತ್ತು ಇತರ ಸವಲತ್ತುಗಳನ್ನು ಸರ್ಕಾರ ಒದಗಿಸಿದೆ ಎಂಬುದನ್ನು ನೌಕರರು ಮರೆಯಬಾರದು ಎಂದು ಅವರು ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ತಂದೆ ಸಾಲ ತೀರಿಸದ್ದಕ್ಕೆ ಅಪ್ರಾಪ್ತ ಮಗನಿಂದ ಬೆತ್ತಲೆ ಪೂಜೆ ಮಾಡಿಸಿದ ದುಷ್ಕರ್ಮಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement