ಸಾಮೂಹಿಕ ನಮಾಜಿಗೆ ಅನುಮತಿ ನೀಡಲು ನಿರಾಕರಿಸಿದ ಬಾಂಬೆ ಹೈಕೋರ್ಟ್

ಮುಂಬೈ,:ರಂಜಾನ್‌ ಆಚರಣೆ ಆರಂಭವಾಗಿದ್ದು, ಮಸೀದಿಯೊಳಗೆ ನಮಾಜ್‌ ಮಾಡಲು ಅನುಮತಿ ಕೋರಿ ಜುಮ್ಮಾ ಮಸೀದಿ ಟ್ರಸ್ಟ್‌ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ಕರ್ನಾಟಕ, ದೆಹಲಿ ಸೇರಿದಂತೆ ವಿವಿಧೆಡೆ ರಂಜಾನ್ ಆಚರಣೆ ಕುರಿತಂತೆ ಕೋವಿಡ್‌ ಮಾರ್ಗಸೂಚಿ ಜಾರಿ ಮಾಡಲಾಗಿದೆ.ಇಫ್ತಾರ್‌ ಕೂಟ ನಡೆಸುವಂತಿಲ್ಲ,
ಮುಂಬೈನಲ್ಲಿ 87,443 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.ಕಳೆದ 24 ಗಂಟೆಗಳಲ್ಲಿ 9,925 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 5,44,942ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 54 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.
ರಂಜಾನ್‌ ತಿಂಗಳಲ್ಲಿ ದಕ್ಷಿಣ ಮುಂಬೈನ ಜುಮ್ಮಾ ಮಸೀದಿಯೊಳಗೆ ನಮಾಜ್‌ ಮಾಡಲು ಅವಕಾಶ ಕೋರಿ ಜುಮ್ಮಾ ಮಸೀದಿ ಟ್ರಸ್ಟ್‌ನ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಬಾಂಬೆ ಹೈಕೋರ್ಟ್‌ ಬುಧವಾರ ನಿರಾಕರಿಸಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ.
ಮಸೀದಿಯೊಳಗೆ ದಿನಂಪ್ರತಿ ಐದು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ತಾರವೀಹ್‌ ನಮಾಜ್‌ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಕೋರಿ ಜುಮ್ಮಾ ಮಸೀದಿ ಟ್ರಸ್ಟ್‌ ಬಾಂಬೆ ಹೈಕೋರ್ಟ್‌ನ ರಜಾಕಾಲದ ಪೀಠದ ಮುಂದೆ ಮನವಿ ಮಾಡಿತ್ತು.
ಮಹಾರಾಷ್ಟ್ರ ಮತ್ತು ಮುಂಬೈ ನಗರದಲ್ಲಿ ವ್ಯಾಪಕವಾಗಿ ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ಆರ್‌ ಡಿ ಧನುಕಾ ಮತ್ತು ವಿ ಜಿ ಬಿಷ್ಟ್‌ ಅವರಿದ್ದ ವಿಭಾಗೀಯ ಪೀಠವು ಮನವಿ ಆಲಿಸಲು ನಿರಾಕರಿಸಿದೆ.
ಸಂಭ್ರಮಾಚರಣೆಯ ಹಕ್ಕು ಅಥವಾ ಧಾರ್ಮಿಕ ಆಚರಣೆಗಳನ್ನು ಅನುಸರಿಸುವುದು ಮುಖ್ಯವಾದರೂ ಸಾರ್ವಜನಿಕ ಹಿತಾಸಕ್ತಿ ಮತ್ತು ನಾಗರಿಕರ ಸುರಕ್ಷತೆ ಬಹುಮುಖ್ಯವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ”ಸದ್ಯ ಕೋವಿಡ್‌ ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ನಮ್ಮ ದೃಷ್ಟಿಯಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅರ್ಜಿದಾರರ ಕೋರಿಕೆಯನ್ನು ಪರಿಗಣಿಸಲಾಗದು” ಎಂದು ಪೀಠ ಹೇಳಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಫೋಟಾನ್‌ಗಳ ಮೇಲಿನ ಪ್ರಯೋಗಗಳಿಗಾಗಿ ಅಲೈನ್ ಆಸ್ಪೆಕ್ಟ್, ಜಾನ್ ಕ್ಲೌಸರ್, ಆಂಟನ್ ಝೈಲಿಂಗರ್‌ಗೆ 2022ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement