ಕರ್ನಾಟಕದಲ್ಲಿ ಶುಕ್ರವಾರವೂ ಹದಿನೈದು ಸಾವಿರ ಸಮೀಪಕ್ಕೇ ಬಂದ ದೈನಂದಿನ ಕೊರೊನಾ ಸೋಂಕು, 78 ಜನರ ಸಾವು

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಗುರುವಾರವೂ ಕೊರೊನಾ  ಸೋಂಕಿನ ಉಲ್ಬಣ ಮುಂದುವರಿದಿದ್ದು, ಹೊಸದಾಗಿ 14,859 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಇದೇ ಸಮಯದಲ್ಲಿ ರಾಜ್ಯದಲ್ಲಿ 78 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,24,509 ಕ್ಕೆ ಏರಿಕೆಯಾಗಿದೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 1,07,315 ಸಕ್ರಿಯ ಪ್ರಕರಣಗಳಿದ್ದು, 577 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 4031 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 10,03,985 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ 9917 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.ಗುರುವಾರ ದೈನಂದಿನ ಪ್ರಕರಣ ಹತ್ತು ಸಾವಿರ ದಾಟಿತ್ತು. ಬೆಂಗಳೂರಿನಲ್ಲಿಯೇ 57 ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 79,616 ಸಕ್ರಿಯ ಪ್ರಕರಣಗಳಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ