ಮೃತ ಚಾಲಕನ ಕುಟುಂಬಕ್ಕೆ ೩೦ ಲಕ್ಷ ರೂ. ಪರಿಹಾರ

posted in: ರಾಜ್ಯ | 0

ಹುಬ್ಬಳ್ಳಿ: ಬಾಗಲಕೋಟ ವಿಭಾಗದ ಜಮಖಂಡಿ ಘಟಕದ ಚಾಲಕರಾದ ರಬೀದ್‌ ರಸೂಲ್ ಕೆ. ಅವಟಿ (ವಯಸ್ಸು ೫೯)ಅವರು ಈ ವಿಜಾಪುರದಿಂದ ಜಮಖಂಡಿ ಮಾರ್ಗದ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ, ಕಿಡಗೇಡಿಗಳು ಬಸ್ಸಿನ ಮುಂಭಾಗದ ಗ್ಲಾಸ್‌ಗೆ ಕಲ್ಲೆಸೆದ ಪರಿಣಾಮವಾಗಿ ಮೃತಪಟ್ಟಿದ್ದಾರೆ.
ಚಾಲಕನ ಕುತ್ತಿಗೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವದಿಂದಾಗಿ ಅವರನ್ನು ಜಮಖಂಡಿಯಲ್ಲಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ತಿಳಿಸಿದೆ.
ಘಟನೆಯ ಕುರಿತು ಮಾಹಿತಿ ಪಡೆದ ವಾಯ್ವಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಾ ಬಾಜಪೇಯಿ ಜಮಖಂಡಿಯಲ್ಲಿರುವ ಮೃತಪಟ್ಟ ಚಾಲಕನ ಮನೆಗೆ ತೆರಳಿಮೃತ ಚಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಅವರ ಕುಟುಂಬಕ್ಕೆ ೩೦ ಲಕ್ಷ ರೂ.ಗಳ ಪರಿಹಾರ ನೀಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ