೧೮ ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ : ಸುಪ್ರಿಂ ಕೋರ್ಟ್‌ಗೆ ಪಿಐಎಲ್‌

ನವ ದೆಹಲಿ: ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ೧೮ ವರ್ಷಗಳ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಬೇಕೆಂದು ನಿರ್ದೇಶಿಸುವಂತೆ ಸರ್ವೋಚ್ವ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಎಐಎಲ್‌) ಸಲ್ಲಿಸಲಾಗಿದೆ.
ನ್ಯಾಯವಾದಿ ರಶ್ಮಿ ಸಿಂಗ್‌ ಅರ್ಜಿ ಸಲ್ಲಿಸಿದ್ದಾರೆ. ೧೮ರಿಂದ ೪೫ ವರ್ಷದವರಿಗೆ ಲಸಿಕೆ ನೀಡದಿರುವುದು ತಾರತಮ್ಯ ಹಾಗೂ ಅವಿವೇಕದ ಕ್ರಮವಾಗಿದೆ. ಅಲ್ಲದೇ ಸಮಾನತೆ ಹಾಗೂ ಜೀವಿಸುವ ಹಕ್ಕಿನ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಹಾಗೂ ಹಲವು ತಜ್ಞರು ಲಸಿಕಾ ಅಭಿಯಾನವನ್ನು ಚುರುಕುಗೊಳಿಸುವಂತೆ ಒತ್ತಾಯಿಸಿದ್ದಾರೆ. ಕೊರೊನಾ ಸಮರ್ಥ ನಿರ್ವಹಣೆಗೆ ಪ್ರತಿದಿನ ಕನಿಷ್ಟ ೧೦ ಮಿಲಿಯನ್‌ ಡೋಸ್‌ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದ್ದಾರೆ ಎಂದು ಪಿಐಎಲ್‌ನಲ್ಲಿ ತಿಳಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement