ಇಂದು, ನಾಳೆ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಭಾರೀ ಮಳೆಗೆ ಮರಗಳು ಉರುಳಿದ ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದಲ್ಲಿಯೂ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬಾಳೆ ಫಸಲು ಸಂಪೂರ್ಣ ಉರುಳಿ ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಸುಳಿಗಾಳಿಯಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದೆ ಓದಿ…
ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆ ಸೂಚನೆ
ಗುರುವಾರ ಮಲೆನಾಡು ಭಾಗಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಕೂಡ ಮಳೆಯಾಗುವ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವುದಾಗಿ ತಿಳಿಸಿದೆ. ಏಪ್ರಿಲ್ 17ರ ವರೆಗೂ ಮಳೆಯಾಗಲಿದ್ದು, ಏಪ್ರಿಲ್ 18ಕ್ಕೆ ತುಂತುರು ಮಳೆಯಾಗುವುದಾಗಿ ಸೂಚನೆ ನೀಡಿದೆ.
ದಕ್ಷಿಣ ಕನ್ನಡ , ಉತ್ತರ ಕನ್ನಡ , ಉಡುಪಿ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ನಗರ ಪ್ರದೇಶದಲ್ಲಿ ಏಪ್ರಿಲ್ 17ರ ವರೆಗೂ ಸಾಧಾರಣ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement