ಕೊರೊನಾ ಹೆಚ್ಚಳ: ಸರ್ಕಾರಿ ಇಲಾಖೆಗಳ ಸಭೆಗೆ ಸದ್ಯಕ್ಕೆ ಬ್ರೇಕ್‌..!

ಬೆಂಗಳೂರು: ಕೋವಿಡ್ 2ನೇ ಅಲೆ ಹಿಂದೆಂದಿಗಿಂತಲೂ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದೆರಡು ತಿಂಗಳ ಅವಧಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಭೆ ನಡೆಸುವುದನ್ನು ನಿಯಂತ್ರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೂಚಿಸಿದ್ದಾರೆ.
ಸಭೆ ನಡೆಸುವುದು ಅನಿವಾರ್ಯವಾದಲ್ಲಿ ಅಧಿಕಾರಿಗಳು ಅಥವಾ ಸಭೆಯಲ್ಲಿ ಪಾಲ್ಗೊಳ್ಳುವವರು ಸಾಕಷ್ಟು ಆರೋಗ್ಯಯುತ ಸಾಮಾಜಿಕ ಅಂತರವಿರುವಂತೆ ಸಭೆ ನಡೆಸಬೇಕು ಹಾಗೂ ವಿಡಿಯೋ ಸಂವಾದದ ಮೂಲಕ ವರ್ಚಲ್ ಆಗಿ ಸಭೆಗಳನ್ನು ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಕೋವಿಡ್ ಸೋಂಕು ವೇಗವಾಗಿ ಹರಡುವುದನ್ನು ತಡೆಗಟ್ಟಲು ಜನರ ಚಲನವಲನ, ಸಂಪರ್ಕ ಆದಷ್ಟು ಕಡಿಮೆ ಮಾಡುವುದು ಉತ್ತಮ. ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅನಿವಾರ್ಯ ಮತ್ತು ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement