ಬೆಳಗಾವಿ ಉಪಚುನಾವಣೆ: ಪಿಪಿಇ ಕಿಟ್‌ ಧರಿಸಿಯೇ ಮತ ಚಲಾವಣೆ..!

posted in: ರಾಜ್ಯ | 0

ಬೆಳಗಾವಿ :ಕೆಎಂಎಫ್ ನಿರ್ದೇಶಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಪುತ್ರ ಅಮರನಾಥ ಜಾರಕಿಹೊಳಿ ಕೊರೊನಾ ಸೋಂಕಿನ ಮಧ್ಯೆಯೂ ಮತದಾನ ಮಾಡಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಶನಿವಾರ ಗೋಕಾಕ ಆಸ್ಪತ್ರೆಯಿಂದ ಅಂಬ್ಯುಲೆನ್ಸ್ನಲ್ಲಿ ಪಿಪಿಇ ಕಿಟ್‌ ಧರಿಸಿ ಬಂದು ಗೋಕಾಕನಲ್ಲಿ ಮತ ಹಾಕಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಜಾರಕಿಹೊಳಿ ಅವರಿಗೆ ಶನಿವಾರ ಕೊರೊನಾ ಸೋಂಕು ದೃಢಪಟ್ಟಿತ್ತು. ಕೊರೋನಾ ವೈರಸ್ ದಾಳಿಯಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಎರಡು ದಿನಗಳ ಹಿಂದೆಯೇ ಅಂಚೆ ಮೂಲಕ ಮತ ಹಾಕಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ