ಮಹಿಳಾ ವಿವಿ ಏ.19ರ ಪರೀಕ್ಷೆ ಮುಂದೂಡಿಕೆ

ವಿಜಯಪುರ : ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಏ.19 ರಂದು ನಡೆಯಬೇಕಿದ್ದ ಅಕ್ಕಮಹಾದೇವಿ ಮಹಿಳಾ ವಿವಿಯ ಯುಜಿ, ಪಿಜಿ ಪರೀಕ್ಷೆ ಮುಂದೂಡಲಾಗಿದೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ವಿಶ್ವ ವಿದ್ಯಾಲಯ ಈ ಸಂಬಂಧ ಪ್ರಕಟಣೆ ಹೊರಡಿಸಿದೆ.ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್​ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿಬರಲು ಸಮಸ್ಯೆ ಆದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ವಿವಿ ಮಾಹಿತಿ ನೀಡಿದೆ.
ಏಪ್ರಿಲ್​ 19ರಂದು ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಪರೀಕ್ಷೆ ಕುರಿತ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವಿವಿಯ ಕುಲಸಚಿವರು (ಮೌಲ್ಯಮಾಪನ) ಸುತ್ತೋಲೆ ಹೊರಡಿಸಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ನಿಮ್ಮ ಕಾಮೆಂಟ್ ಬರೆಯಿರಿ

advertisement