ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಟ್ವೀಟರ್ನಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಶನಿವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ” ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಟ್ವೀಟ್ ಮೂಲಕ ಎಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ ಕುಮಾರಸ್ವಾಮಿಯವರು ಕೆಲವು ದಿನಗಳ ಹಿಂದೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರವನ್ನು ಕೈಗೊಂಡಿದ್ದರು. ಶನಿವಾರ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.
ಎಚ್. ಡಿ. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ. ಪಿ. ನಗರದ ನಿವಾಸದಲ್ಲಿಯೇ ಇದ್ದಾರೆ. ಹೋಂ ಐಸೋಲೇಷನ್‌ನಲ್ಲಿದ್ದು, ಅವರು ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ.
ನಿಮ್ಮ ಕಾಮೆಂಟ್ ಬರೆಯಿರಿ