ವಿಧಾನಸೌಧ, ವಿಕಾಸ ಸೌಧ, ಎಂಎಸ್‌ ಬಿಲ್ಡಿಂಗ್‌ಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದ ಕಾರಣ ಈಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.
ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ.
ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕೊರೊನಾ ವೈರಸ್ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಸಚಿವರುಗಳ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಗಳಲ್ಲಿ ದಿನನಿತ್ಯ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಸಚಿವಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶ ನಿಯಂತ್ರಿಸುವ ಅನಿವಾರ್ಯತೆ ಇದೆ. ಆದ್ದರಿಂದ ಈ ಕಟ್ಟಡಗಳಿಗೆ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಿದ ಭೇಟಿ ಹೊರತುಪಡಿಸಿ, ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಿದ್ದಾರೆ.
ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳ ಹಿರಿಯ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದಿರುವ ಸಾರ್ವಜನಿಕರಿಗೆ ಮಾತ್ರ, ಪೂರ್ವಾನುಮತಿ ಪತ್ರಗಳನ್ನು ಪರಿಶೀಲಿಸಿ, ಮಧ್ಯಾಹ್ನ 3.30 ಗಂಟೆಯ ನಂತರವಷ್ಟೇ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಮಿತಿಯಲ್ಲಿ ಪ್ರವೇಶ ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement