ರೈತ ಹೋರಾಟಗಾರರ ಜೊತೆ ಮಾತುಕತೆ ಆರಂಭಿಸಿ: ಪ್ರಧಾನಿಗೆ ಬಿಜೆಪಿ ಸರ್ಕಾರದ ಡಿಸಿಎಂ ಒತ್ತಾಯ

ಚಂಡೀಗಢ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಮಾತುಕತೆ ಆರಂಭಿಸಬೇಕು ಎಂದು ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ ಚೌಟಾಲಾ ಹೇಳಿದ್ದಾರೆ.
ಈ ಕುರಿತು ಅವರು ಪ್ರಧಾನಿಗೆ ಪತ್ರ ಬರೆದಿದ್ದು, ನಾಲ್ಕು ತಿಂಗಳುಗಳಿಂದ ರೈತರು ಬೇಡಿಕೆಗಳ ಈಡೇರಿಕೆಗೆ ಹೋರಾಟ ಮಾಡುತ್ತಿದ್ದಾರೆ. ಅನ್ನದಾತರು ದೆಹಲಿ ಗಡಿಯ ರಸ್ತೆಯ ಮೇಲಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದ್ದಾರೆ. ನಾಲ್ವರು ಸಚಿವರನ್ನೊಳಗೊಂಡ ತಂಡ ರೈತ ಹೋರಾಟಗಾರರೊಂದಿಗೆ ಮಾತುಕತೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

ನಿಮ್ಮ ಕಾಮೆಂಟ್ ಬರೆಯಿರಿ

advertisement