ರೆಮ್‍ಡಿಸಿವಿರ್ ಅಕ್ರಮವಾಗಿ ಮಾರಾಟ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ಕೊರೊನಾ ಸೋಂಕಿನ ಚಿಕಿತ್ಸೆಗೆ ಬಳಕೆ ಮಾಡಲಾಗುವ ರೆಮ್‍ಡಿಸಿವಿರ್ ಔಷಧಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಅಡಗಿಸಿಟ್ಟು ಕೃತಕ ಅಭಾವ ಸೃಷ್ಟಿಸುತ್ತಿರುವ ಆರೋಪಗಳು ಕೇಳಿಬರುತ್ತಿರುವ ಕಾರಣ ಬೆಂಗಳೂರಿನಾದ್ಯಂತ ಸಿಸಿಬಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಸುದ್ದಗುಂಟೆ ಪಾಳ್ಯದ ಗುರುಶ್ರೀ ಮೆಡಿಕಲ್ಸ್‍ನ ರಾಜೇಶ್ ಮತ್ತು ಶಕೀಬ್, ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಹಿಲ್ ಅವರನ್ನು ಬಂಧಿಸಲಾಗಿದೆ .ಬಂಧಿತರು ರೆಮ್‍ಡಿಸಿವಿರ್ ಔಷಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಎಂಆರ್‍ಪಿ ದರವನ್ನು ಮೀರಿ ಪ್ರತಿ ಬಾಟಲ್‍ಗೆ 10,500 ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ 11 ಇಂಜೆಕ್ಷನ್ ಬಾಟಲ್‍ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement