ಲಾಕ್‌ಡೌನ್‌ ಇಲ್ಲ, ಆದರೆ ಕಠಿಣ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿ ಇಲ್ಲ. ಆದರೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ ತರಲಾಗುತ್ತದೆ ಎಂದರು.
ನಾಳೆ ಸರ್ವಪಕ್ಷ ಸಭೆ ನಡೆಯಲಿದ್ದು, ಅದಕ್ಕೆ ಪೂರಕವಾಗಿ ಭಾನುವಾರ ಸಚಿವರ ಸಭೆ ನಡೆದಿದೆ. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ನಾಳಿನ ಸಭೆಯಲ್ಲಿಯೂ ಈ ಬಗ್ಗೆ ಚರ್ಚಿಸಿ, ಎಲ್ಲಾ ಪಕ್ಷಗಳ ನಾಯಕರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇವೆ. ಮಂಗಳವಾರ ಮುಖ್ಯಮಂತ್ರಿಗಳು ಕಠಿಣ ನಿಯಮದ ಬಗ್ಗೆ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement