ಬೆಂಗಳೂರಲ್ಲಿ ಲಾಕ್‌ಡೌನ್‌ ಅಥವಾ ವೀಕೆಂಡ್‌ ಲಾಕ್‌ಡೌನ್‌: ನಾಳಿನ ಸಭೆಯಲ್ಲಿ ನಿರ್ಧಾರ..?

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳು ವೇಗದಲ್ಲಿ ಹರಡುತ್ತಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಜಾರಿ ಮಾಡಬೇಕೋ ಬೇಡವೋ ಎಂಬುದು ನಾಳಿನ (ಸೋಮವಾರ. ಏ.೧೯) ಸಭೆಯಲ್ಲಿಯೇ ನಿರ್ಧಾರವಾಗಲಿದೆ.
ನಾಳೆ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಬೆಂಗಲೂರಿನ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ಬೆಂಗಳೂರಿನಲ್ಲಿ ಲಾಕ್‍ಡೌನ್ ಮಾಡುತ್ತಾರೆಯೋ ಅಥವಾ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುತ್ತದೆಯೋ ಎಂಬುದು ನಾಳೆ ಸರ್ಕಾರದ ತೀರ್ಮಾನ ಹೊರಬೀಳಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ರಾಜಧಾನಿಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೂ ಹಬ್ಬುತ್ತಿದೆ. ನಾವು ಕಠಿಣ ಕ್ರಮಗಳನ್ನು ಕೈಗೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನರಕ ಸದೃಶ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದೆ ಇಂತಹ ಪರಿಸ್ಥಿತಿ ಮರುಕಳಿಸುವುದು ಬೇಡ ಎನ್ನುವುದಾದರೆ ಅನಿವಾರ್ಯವಾಗಿ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಿದ್ದು, ವೀಕೆಂಡ್ ಲಾಕ್‍ಡೌನ್ ಜಾರಿ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಬಗ್ಗೆ ಚಿಂತನೆ ನಡೆದಿದ್ದು, ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ಲಾಕ್‍ಡೌನ್ ಜಾರಿ ಚಿಂತನೆಯೂ ನಡೆದಿದೆ ಎನ್ನಲಾಗಿದೆ.
ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಅನಗತ್ಯವಾಗಿ ತಿರುಗಾಟ, ಗುಂಪಗೂಡಿದರೆ ಪ್ಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲು ಮಾಡಬಹುದು.
ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿರುವ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಕಾರ್ಯ ನಿರ್ವಹಿಸಬಹುದಾಗಿದೆ.
ಕೋವಿಡ್-19 ಸಂಬಂಧಿಸಿದ ಕಾರ್ಯಾಚರಣೆಗಾಗಿ ನಿಯೋಜಿಸಿರುವ ಸರ್ಕಾರೇತರ ಸಂಸ್ಥೆಗಳು, ಸ್ವಯಂ ಸೇವಕರು ಹಾಗೂ ಇತರೆ ಎಲ್ಲ ಕಚೇರಿಗಳ ಸಿಬ್ಬಂದಿ ಮನೆಯಿಂದಲೇ ಕಾರ್ಯ ನಿರ್ವಹಿಸಲು ಸೂಚಿಸಬಹುದು.

ಪ್ರಮುಖ ಸುದ್ದಿ :-   ನಂದಿನಿ ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ ; ಜುಲೈ 24ರಿಂದ ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement