ಕೋವಿಡ್‌ ಉಲ್ಬಣ: ಪಶ್ಚಿಮ ಬಂಗಾಳದ ಎಲ್ಲ ಸಮಾವೇಶ ರದ್ದುಗೊಳಿಸಿದ ರಾಹುಲ್‌

ನವ ದೆಹಲಿ: ಕೋವಿಡ್ -19 ಉಲ್ಬಣದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಉಳಿದಿರುವ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ ಮತ್ತು “ದೊಡ್ಡ ಸಾರ್ವಜನಿಕ ಬೃಹತ್‌ ಸಮಾವೇಶ ನಡೆಸುವುದರಿಂದ ಆಗುವ ಪರಿಣಾಮಗಳ ಬಗ್ಗೆ ಯೋಚಿಸಬೇಕು” ಎಂದು ಎಲ್ಲಾ ರಾಜಕೀಯ ಮುಖಂಡರನ್ನು ಒತ್ತಾಯಿಸಿದ್ದಾರೆ.
ಕೋವಿಡ್ ಪರಿಸ್ಥಿತಿಯ ದೃಷ್ಟಿಯಿಂದ, ನಾನು ಪಶ್ಚಿಮ ಬಂಗಾಳದಲ್ಲಿ ನನ್ನ ಎಲ್ಲಾ ಸಾರ್ವಜನಿಕ ಸಮಾವೇಶಗಳನ್ನು ಸ್ಥಗಿತಗೊಳಿಸುತ್ತಿದ್ದೇನೆ. ಪ್ರಸ್ತುತ ಸಂದರ್ಭಗಳಲ್ಲಿ ದೊಡ್ಡ ಸಾರ್ವಜನಿಕ ಸಮಾವೇಶ ನಡೆಸುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸಲು ನಾನು ಎಲ್ಲಾ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ ”ಎಂದು ಗಾಂಧಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ರಾಹುಲ್‌ ಗಾಂಧಿ ಘೋಷಣೆಯು ದೇಶವು ಒಂದು ದಿನದಲ್ಲಿ ಅತಿ ಹೆಚ್ಚು ಏಕದಿನ 2.61 ಲಕ್ಷ ಕೋವಿಡ್ -19 ಪ್ರಕರಣಗಳನ್ನು ಕಂಡ ದಿನವೇ ಬಂದಿದೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 18 ಲಕ್ಷಗಳನ್ನು ದಾಟಿದೆ. ದೈನಂದಿನ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಬಂಗಾಳದಲ್ಲಿ ಚುನಾವಣಾ ಪ್ರಚಾರವು ಭರದಿಂದ ಸಾಗಿದೆ. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಅನೇಕ ಸಮಾವೇಶಗಳು ಮತ್ತು ರೋಡ್ ಶೋಗಳನ್ನು ನಡೆಸಲು ಸಜ್ಜಾಗಿದ್ದಾರೆ.
ಅದೇ ರೀತಿ ಬಿಜೆಪಿಯ ಬಂಗಾಳ ಅಭಿಯಾನದ ಮುಖವಾಗಿರುವ ಪ್ರಧಾನಿ ನರೇಂದ್ರ ಮೋದಿ ನಿವಾರ ರಾಜ್ಯದಲ್ಲಿ ಅನೇಕ ಬೃಹತ್‌ ಸಮಾವೇಶಗಳಲ್ಲಿ ಪಾಲ್ಗೊಂಡರು. ಅಸನ್ಸೋಲ್‌ನಲ್ಲಿ ನಡೆದ ‌ಸಮಾವೇಶದಲ್ಲಿ ಮೋದಿ ಅವರು ಸೇರಿದ್ದ ದೊಡ್ಡ ಜನಮೂಹವನ್ನು ನೋಡಿ “ಜನ ಉಲ್ಲಾಸಗೊಂಡಿದ್ದಾರೆ” ಎಂದು ಹೇಳಿದ್ದರು.
ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್ ಟೀಕಿಸಿತ್ತು, ಪಕ್ಷದ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸಲು “ದೆಹಲಿಯಲ್ಲಿ ಉಳಿಯುವ ಬದಲು” ಪಶ್ಚಿಮ ಬಂಗಾಳದಲ್ಲಿ ಸಮಾವೇಶದಲ್ಲಿ ಪಾಲ್ಗೊಂಡ ಮೋದಿ ಆಘಾತಕಾರಿ ನಿಷ್ಠುರತೆ” ತೋರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಘಾಟ್‌ಕೋಪರ್‌ ಹೋರ್ಡಿಂಗ್ ಕುಸಿತ ದುರಂತ : ಉದಯಪುರದಲ್ಲಿ ಜಾಹೀರಾತು ಫಲಕದ ಮಾಲೀಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement