ನಾಲ್ಕು ವಿಮಾನ ಸಂಸ್ಥೆಗಳ ವಿರುದ್ಧ ದೆಹಲಿ ಸರ್ಕಾರದಿಂದ ಎಫ್‌ಐಆರ್‌

ನವ ದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಬೇಜವಾಬ್ದಾರಿ ಮೆರೆಯುತ್ತಿರುವ ನಾಲ್ಕು ವಿಮಾನಯಾನ ಸಂಸ್ಥೆಗಳ ವಿರುದ್ಧ ದೆಹಲಿ ಸರ್ಕಾರ ಎಫ್‌ಐಆರ್ ದಾಖಲಿಸಿದೆ.
ಕೋವಿಡ್ ನಿಯಮ ಉಲ್ಲಂಘನೆ ಆರೋಪದಡಿ ಇಂಡಿಗೋ, ಏರ್ ಏಷ್ಯಾ, ವಿಸ್ತಾರಾ ಹಾಗೂ ಸ್ಪೈಸ್ ಜೆಟ್ ಏರ್ ಲೈನ್ಸ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಹಾರಾಷ್ಟ್ರದಲ್ಲಿಯೇ ಈ ಏರ್ ಲೈನ್ಸ್ ಸಂಸ್ಥೆಗಳು ಪ್ರಯಾಣಿಕರ ನೆಗಟಿವ್ ವರದಿ ಪಡೆಯುತ್ತಿಲ್ಲ ಎಂದು ದೆಹಲಿ ಸರ್ಕಾರ ಆರೋಪಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ನೆಗೆಟಿವ್ ವರದಿ ಪಡೆಯಬೇಕು ಎಂಬ ನಿಯಮ ಜಾರಿಗೆ ಬಂದಿದೆ.
ಅತಿಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಮಹಾರಾಷ್ಟ್ರದಲ್ಲಿಯೇ ಈ ಏರ್ ಲೈನ್ಸ್ ಸಂಸ್ಥೆಗಳು ಪ್ರಯಾಣಿಕರ ನೆಗಟಿವ್ ವರದಿ ಪಡೆಯುತ್ತಿಲ್ಲ ಎಂದು ದೆಹಲಿ ಸರ್ಕಾರ ಆರೋಪಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ನೆಗೆಟಿವ್ ವರದಿ ಪಡೆಯಬೇಕು ಎಂಬ ನಿಯಮ ಜಾರಿಗೆ ಬಂದಿದೆ. ಆದರೆ ಮಹಾರಾಷ್ಟ್ರದಿಂದ ಹೊರಡುವ ಪ್ರಯಾಣಿಕರಿಂದ ಈ ನಾಲ್ಕೂ ವಿಮಾನಯಾನ ಸಂಸ್ಥೆಗಳು ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಪಡೆಯುತ್ತಿಲ್ಲ. ಇದು ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ದೆಹಲಿಯಲ್ಲಿ 24 ಗಂಟೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಕೇಸ್ ಗಳು ದಾಖಲಾಗುತ್ತಿವೆ ಈ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದೆ.

ಪ್ರಮುಖ ಸುದ್ದಿ :-   26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement