ಅರ್ಧಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗದಂತೆ ಮುಚ್ಚಿಟ್ಟ ತೆಲಂಗಾಣ ಸರ್ಕಾರ..?

ಹೈದರಾಬಾದ್: ತೆಲಂಗಾಣದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸರ್ಕಾರ ಮಾಧ್ಯಮಕ್ಕೆ ನೀಡುತ್ತಿರುವ ಮಾಹಿತಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ ಎಂದು ಆರೋಪಿಸಲಾಗುತ್ತಿದೆ.
ತೆಲಂಗಾಣ ಸರ್ಕಾರ ಮಾಧ್ಯಮಕ್ಕೆ ನೀಡಿರುವ ಸಂಖ್ಯೆಗಿಂತ ಎರಡು ಪಟ್ಟು ಪ್ರಕರಣಗಳು ಪತ್ತೆಯಾಗುತ್ತಿವೆ, ಜಿಲ್ಲಾ ಆರೋಗ್ಯಾಧಿಕಾರಿಗಳು ನೀಡಿರುವ ವರದಿ ಸಂಖ್ಯೆಯನ್ನು ಸರ್ಕಾರವು ಮಾಧ್ಯಮಗಳಿಗೆ ನೀಡುವ ಮುನ್ನ ಕಡಿತಗೊಳಿಸಲಾಗುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.
ಇಂಡಿಯನ್ ಎಕ್ಸ್‌ಪ್ರೆಸ್’ ನಡೆಸಿರುವ ರಿಯಾಲಿಟಿ ಚೆಕ್‌ನಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ. ಏಪ್ರಿಲ್ 17 ರಂದು 13 ಜಿಲ್ಲೆಗಳಲ್ಲಿ ವರದಿಯಾಗಿರುವ ಕೋವಿಡ್ 19 ಪ್ರಕರಣಗಳಿಗೆ ಹೋಲಿಸಿದರೆ, ಅದೇ ಜಿಲ್ಲೆಗಳಲ್ಲಿ ನೀಡಿರುವ ಜಿಲ್ಲಾಧಿಕಾರಿಗಳು ಹೇಳಿರುವ ಮಾಹಿತಿಗಿಂತ ಶೇ.66ರಷ್ಟು ಪ್ರಕರಣಗಳನ್ನು ಕಡಿಮೆ ಮಾಡಿರುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ.
13 ಜಿಲ್ಲೆಗಳಲ್ಲಿ ಏಪ್ರಿಲ್ 17ರಂದು ವರದಿಯಾದ ಪ್ರಕರಣಗಳು ಒಟ್ಟು 4,868ರಷ್ಟಿದೆ. ಆದರೆ ಸರ್ಕಾರ ನೀಡಿರುವ ಮಾಹಿತಿ ಕೇವಲ 1,627ರಷ್ಟು ಮಾತ್ರ ಇದೆ. ಜಿಲ್ಲಾಧಿಕಾರಿಗಳಿಗೆ ಪ್ರತಿ ಜಿಲ್ಲೆಗಳ ಕೊರೊನಾ ಸೋಂಕಿತರ ಮಾಹಿತಿಯನ್ನು ಪ್ರತ್ಯೇಕವಾಗಿ ನೀಡದಿರಲು ಸೂಚಿಸಲಾಗಿದೆ.
ಸ್ವಲ್ಪ ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಪ್ರತಿ ಜಿಲ್ಲೆಗಳ ಕೊರೊನಾ ಸೋಂಕಿತರ ಮಾಹಿತಿಯನ್ನು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಹಂಚಿಕೊಳ್ಳುತ್ತಿದ್ದರು. ಈಗ ಅದನ್ನು ತಡೆಹಿಡಿಯಲಾಗಿದೆ ಎಂದು ವರದಿ ಹೇಳಿದೆ.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement