ಲಕ್ನೋ: ಉತ್ತರ ಪ್ರದೇಶದಲ್ಲಿ ಕೊರೋನಾ ಸೋಂಕು ತೀವ್ರ ಏರಿಕೆ ಕಾರಣ ರಾಜ್ಯದ 5 ನಗರಗಳಲ್ಲಿ ಲಾಕ್ಡೌನ್ ಜಾರಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಉಲ್ಬಣಗೊಳ್ಳುತ್ತಿರುವ ಕೊರೋನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 5 ನಗರಗಳಲ್ಲಿ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ಜಾರಿಗೊಳಿಸಲು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಅಜಿತ್ ಕುಮಾರ್ ಮತ್ತು ಸಿದ್ಧಾರ್ಥ ವರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಮಾಡಿದೆ.
ವಾರಾಣಸಿ, ಪ್ರಯಾಗ್ ರಾಜ್, ಕಾನ್ಪುರ್, ಲಕ್ನೋ ಮತ್ತು ಗೋರಖ್ ಪುರದಲ್ಲಿ ಏಪ್ರಿಲ್ 26 ರ ವರೆಗೆ ಲಾಕ್ಡೌನ್ ಜಾರಿ ಮಾಡಲು ಅಲಹಾಬಾದ್ ಹೈಕೋರ್ಟ್ ಆದೇಶ ಹೊರಡಿಸಿದೆ. ಉತ್ತರ ಪ್ರದೇಶದಲ್ಲಿ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿದ್ದು, 5 ನಗರಗಳಲ್ಲಿ ಸೋಂಕು ನಿಯಂತ್ರಣಕ್ಕೆ ಏಪ್ರಿಲ್ 26 ರವರೆಗೆ ಲಾಕ್ ಡೌನ್ ಜಾರಿ ಮಾಡಲು ಆದೇಶಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ